ಮತ್ತೊಂದು ಎಡವಟ್ಟು ಮಾಡಿಕೊಂಡ ಎಐಸಿಸಿ ಭಾವಿ ಅಧ್ಯಕ್ಷ ರಾಹುಲ್ ಗಾಂಧಿ
ಸಾರ್ವಜನಿಕ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ಎಡವಟ್ಟು ಮಾಡಿಕೊಳ್ಳುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ನವದೆಹಲಿ: ಸಾರ್ವಜನಿಕ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ಎಡವಟ್ಟು ಮಾಡಿಕೊಳ್ಳುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆಗಳನ್ನು ಕೇಳುತ್ತಿರುವ ರಾಹುಲ್ ಗಾಂಧಿ ಗಣಿತದ ಲೆಕ್ಕಾಚರಗಳು ತಪ್ಪಾಗಿದ್ದ ಫೋಟೊವೊಂದನ್ನು ಟ್ವೀಟ್ ಮಾಡಿದ್ದರು. ಆದರೆ ತಕ್ಷಣವೇ ಅದನ್ನು ಡಿಲೀಟ್ ಮಾಡಿದ್ದು ಹೊಸ ಚಿತ್ರದ ಸಹಿತ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಟ್ವೀಟ್ ಗಳು ಗೊಂದಲಮಯವಾಗಿತ್ತು. ರಾಹುಲ್ ಗಾಂಧಿ ಕೇಳುವ ಪ್ರಶ್ನೆಗಳನ್ನು ಯಾರು ಸಿದ್ಧಪಡಿಸುತ್ತಾರೆ ಎಂಬುದು ಗೊತ್ತಿಲ್ಲ. ರಾಹುಲ್ ಗಾಂಧಿ ಅವರ ಪ್ರಶ್ನೆಗಳನ್ನು ಸಿದ್ಧಪಡಿಸುವವರು ಡಾಟಾಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ ಅಥವಾ ಅವರಿಗೆ ಅನುಕೂಲವಾಗುವಂತೆ ತಪ್ಪಾಗಿ ಅರ್ಥೈಸಿಕೊಳ್ಳುತ್ತಾರೆ ಎಂದು ರಾಜ್ಯ ಖಾತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಗುಜರಾತ್ ನ ಅಭಿವೃದ್ಧಿ ವಿಷಯ ಹಾಗೂ 7 ನೇ ವೇತನ ಆಯೋಗದಲ್ಲಿ ಕನಿಷ್ಠ ವೇತನ ನೀಡುವುದರ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ತಮ್ಮ ಮೊದಲ ಟ್ವೀಟ್ ನಲ್ಲಿ ತಪ್ಪು ಅಂಕಿ-ಅಂಶಗಳನ್ನು ಟ್ವೀಟ್ ಮಾಡಿದ್ದರು.