ಗಡಿಚಿರೋಲಿ: ಮಹಾರಾಷ್ಟ್ರದ ಜಿಂಗನೂರ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಡದೆ ಗುಂಡಿನ ಕಾಳಗದಲ್ಲಿ ಐವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ಶಂಕಿತ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭದ್ರತಾ ಪಡೆ, ದಟ್ಟ ಅರಣ್ಯದಲ್ಲಿ ನಕ್ಸಲರ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಹೊರ ಬಂದಿದ್ದು, ತಮ್ಮ ಮೇಲೆ ದಾಳಿ ನಡೆಸಿದ ಏಳು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಅರಣ್ಯದಲ್ಲಿ ಇನ್ನು ಕೆಲ ನಕ್ಸಲರು ತಪ್ಪಿಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾವೋವಾದಿ ಗುಂಪು ಡಿಸೆಂಬರ್ 2-8ರ ವರೆಗೆ 'ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ(ಪಿಎಲ್ ಜಿಎ)ಯ ವಾರ್ಷಿಕೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಧನೊರಾ ಮತ್ತು ಭಮರಾಗಡ್ ಉಪ ಜಿಲ್ಲೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಿಂಸಾತ್ಮಕ ಚಟುವಟಿಕೆಗಳು ಉಲ್ಬಣಗೊಂಡಿವೆ.