ಸಂಗ್ರಹ ಚಿತ್ರ 
ದೇಶ

ನೋಟು ನಿಷೇಧಗೊಂಡ 53 ದಿನದೊಳಗೆ 2000 ರು. ನಕಲಿ ನೋಟು ಚಲಾವಣೆ: ಎನ್‌ಸಿಆರ್‌ಬಿ

500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧಗೊಂಡ 53 ದಿನದೊಳಗೆ ನೂತನವಾಗಿ ಹೊರಬಂದಿದ್ದ 2000 ಮುಖಬೆಲೆಯ ನಕಲಿ ನೋಟುಗಳು...

ನವದೆಹಲಿ: 500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧಗೊಂಡ 53 ದಿನದೊಳಗೆ ನೂತನವಾಗಿ ಹೊರಬಂದಿದ್ದ 2000 ಮುಖಬೆಲೆಯ ನಕಲಿ ನೋಟುಗಳು ಚಲಾವಣೆಯಾಗಿದ್ದವು ಎಂದು ರಾಷ್ಟ್ರೀಯ ಅಪರಾಧ ದಾಖಲಾತಿ ಘಟಕ(ಎನ್‌ಸಿಆರ್‌ಬಿ) ಸ್ಫೋಟಕ ಮಾಹಿತಿಯನ್ನು ಬಹಿರಂಗಗೊಳಿಸಿದೆ. 
ನಕಲಿ ನೋಟುಗಳ ಹಾವಳಿಯನ್ನು ತಡೆಗಟ್ಟುವ ಸಲುವಾಗಿ 2016ರ ನವೆಂಬರ್ 8ರಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ತೀರ್ಮಾನವನ್ನು ಘೋಷಿಸಿದ್ದರು. ಇದಾಗಿ ಕೇವಲ 53 ದಿನದೊಳಗೆ ನೂತನ 500 ಹಾಗೂ 2000 ಮುಖಬೆಲೆಯ ನಕಲಿ ನೋಟುಗಳು ಹೊರಬಂದಿದ್ದವು. ಪೊಲೀಸರು ಮೊದಲಿಗೆ 2,272 ನಕಲಿ 2000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಸಿಆರ್‌ಬಿ ಹೇಳಿದೆ. 
ಗುಜರಾತ್(1300) ನಲ್ಲಿ ಹೆಚ್ಚು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪಂಜಾಬ್(548), ಕರ್ನಾಟಕ(254), ತೆಲಂಗಾಣ(114), ಮಹಾರಾಷ್ಟ್ರ(27), ಮಧ್ಯಪ್ರದೇಶ(8), ರಾಜಸ್ತಾನ(6) ಮತ್ತು ಆಂಧ್ರಪ್ರದೇಶ ಮತ್ತು ಹರಿಯಾಣದಲ್ಲಿ ತಲಾ 3 ನೋಟು. ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ತಲಾ 2 ನೋಟು. ಮಣಿಪುರ ಮತ್ತು ಒಡಿಶಾದಲ್ಲಿ ತಲಾ 1 ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಎನ್‌ಸಿಆರ್‌ಬಿ ಮಾಹಿತಿ ನೀಡಿದೆ. 
ಸದ್ಯ ಭಾರತದಾದ್ಯಂತ ಸುಮಾರು 2,81,839 ನಕಲಿ 2000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ನೋಟು ನಿಷೇಧಗೊಂಡ ನಂತರ ನಕಲಿ ನೋಟುಗಳು ಚಲಾವಣೆಯಾಗಲು ಹೆಚ್ಚು ದಿನ ತೆಗೆದುಕೊಳ್ಳಲಿಲ್ಲ ಎಂದು ಎನ್‌ಸಿಆರ್‌ಬಿ ಹೇಳಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್