ಪ್ರಧಾನಿ ಮೋದಿ 'ನೀಚ ಆದ್ಮಿ': ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ
ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರು ಗುರುವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದು,...
ನವದೆಹಲಿ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರು ಗುರುವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದು, ಮೋದಿ ನೀಚ ಜಾತಿಗೆ ಸೇರಿದೆ ವ್ಯಕ್ತಿ ಎಂದು ಮತ್ತೆ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಈ ಹಿಂದೆ 2014ರ ಲೋಕಸಭೆ ಚುನಾವಣೆ ವೇಳೆ ನರೇಂದ್ರ ಮೋದಿ ಅವರನ್ನು ಚಾಯ್ ವಾಲಾ ಎಂದು ಹೀಯ್ಯಾಳಿಸಿದ್ದ ಮಣಿಶಂಕರ್ ಈಗ ಮೋದಿಯನ್ನು ಅತ್ಯಂತ ನೀಚ ಮನುಷ್ಯ ಎಂದಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದಕ್ಕೆ ಪ್ರತಿಕ್ರಿಯಿಸಿದ ಮಣಿಶಂಕರ್ ಅಯ್ಯರ್, 'ಆ ಮುನುಷ್ಯ ನೀಚ ಜಾತಿಗೆ ಸೇರಿದ ಮನುಷ್ಯ. ಅವರಿಗೆ ಯಾವುದೇ ಸಭ್ಯತೆ ಇಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಾರ್ಯಕ್ರಮದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇತ್ತಾ' ಎಂದು ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರ ಉದ್ಘಾಟಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಬಾಬಾ ಸಾಹೇಬರ ಹೆಸರಿನಲ್ಲಿ ಮತ ಕೇಳುತ್ತಿದ್ದವರು ಈಗ ಬಾಬಾ ಬೋಲೇನಾಥ್ ನನ್ನೂ ಸ್ಮರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.