ಯೋಗಿ ಆದಿತ್ಯನಾಥ 
ದೇಶ

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥರನ್ನು ವರಿಸಿದ ಅಂಗನವಾಡಿ ಕಾರ್ಯಕರ್ತೆ!

ಉತ್ತಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವರಿಸುವ ಮೂಲಕ ಸರ್ಕಾರದ ಗಮನವನ್ನು ತಮ್ಮತ್ತ ಸೆಳೆಯಲು ಅಂಗನವಾಡಿ...

ಲಖನೌ: ಉತ್ತಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವರಿಸುವ ಮೂಲಕ ಸರ್ಕಾರದ ಗಮನವನ್ನು ತಮ್ಮತ್ತ ಸೆಳೆಯಲು ಅಂಗನವಾಡಿ ಕಾರ್ಯಕರ್ತೆಯೊಬ್ಬರು ವಿಶಿಷ್ಟವಾಗಿ ಪ್ರತಿಭಟನೆಯನ್ನು ನಡೆಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಉತ್ತರಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಆದಿತ್ಯನಾಥ ಅವರ ಸರ್ಕಾರಕ್ಕೆ ನಾಲ್ಕು ತಿಂಗಳ ಗಡುವು ನೀಡಿದ್ದರು. ಆದರೆ ಅಧಿಕಾರಿಕ್ಕೆ ಬಂದು ಎಂಟು ತಿಂಗಳು ಕಳೆದರು ತಮ್ಮ ಬೇಡಿಕೆಗಳು ಈಡೇರದಿದ್ದರಿಂದ ಅಂಗನವಾಡಿ ಕಾರ್ಯಕರ್ತೆಯರೂ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 
ಸೀತಾಪುರದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ವರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಫೋಟೋಗೆ ಹಾರ ಹಾಕಿ ವಧುವಾಗಿ ಅವರನ್ನು ವರಿಸಿದಳು. ನೆರದ ಅಂಗನವಾಡಿ ಕಾರ್ಯಕರ್ತೆಯರು ಮದುವೆ ಶುಭ ಮುಹೂರ್ತದಲ್ಲಿ ವೇದ ಮಂತ್ರ ಘೋಷಗೈದ ಗಟ್ಟಿ ಮೇಳ ಬಾರಿಸಿದರು. 
ನಮ್ಮ ಬೇಡಿಕೆಗಳನ್ನು ಪತಿರಾಯ ಸಿಎಂ ಯೋಗಿ ಅವರು ಈಡೇರಿಸದಿದ್ದರೆ ನಾನು ಕುದುರೆಯೇರಿ ರಾಜಧಾನಿಗೆ ಹೋಗಿ ಪತಿರಾಯರನ್ನು ನೇರವಾಗಿ ಕಾಣುತ್ತೇನೆ ಎಂದು ಸೀತಾಪುರದ ಸಿಎಂ ವಿವಾಹಿತ ಅಂಗನವಾಡಿ ಕಾರ್ಯಕರ್ತೆ ಮಹಿಳಾ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷೆ ನೀತು ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!