ಮ್ಯಾಕ್ಸ್ ಆಸ್ಪತ್ರೆ 
ದೇಶ

ಬದುಕಿದ್ದ ಮಗು ಮೃತಪಟ್ಟಿದೆ ಎಂದು ಘೋಷಿಸಿದ್ದ ದೆಹಲಿಯ ಮ್ಯಾಕ್ಸ್ ಆಸ್ಪತ್ರೆ ಲೈಸೆನ್ಸ್ ರದ್ದು

ಇತ್ತೀಚೆಗೆ ಬದುಕಿದ್ದ ಮಗುವನ್ನು ಸತ್ತಿದೆ ಎಂದು ಘೋಷಿಸಿದ್ದ ದೆಹಲಿಯ ಶಾಲಿಮಾರ್ ಭಾಗ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯ ಪರವಾನಗಿಯನ್ನು....

ನವದೆಹಲಿ: ಇತ್ತೀಚೆಗೆ ಬದುಕಿದ್ದ ಮಗುವನ್ನು ಸತ್ತಿದೆ ಎಂದು ಘೋಷಿಸಿದ್ದ ದೆಹಲಿಯ ಶಾಲಿಮಾರ್ ಭಾಗ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯ ಪರವಾನಗಿಯನ್ನು ದೆಹಲಿ ಸರ್ಕಾರ ಶುಕ್ರವಾರ ರದ್ದುಗೊಳಿಸಿದೆ.
ಮ್ಯಾಕ್ಸ್ ಆಸ್ಪತ್ರೆಯ ಲೈಸೆನ್ಸ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದ್ದು, ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಬಹುದು. ಆದರೆ ಹೋರ ರೋಗಿಗಳನ್ನು ದಾಖಲಿಸಿಕೊಳ್ಳುವಂತಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಹೇಳಿದ್ದಾರೆ.
ಮ್ಯಾಕ್ಸ್ ಆಸ್ಪತ್ರೆಯಲ್ಲಿರುವ ರೋಗಿಗಳು ಬಯಸಿದರೆ ಬೇರೆ ಆಸ್ಪತ್ರೆಗೆ ಅವರನ್ನು ಸ್ಥಳಾಂತರಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ತನಿಖಾ ವರದಿಯನ್ನು ಆಸ್ಪತ್ರೆಗೆ ನೀಡಿದ ನಂತರವೇ ಪರವಾನಗಿ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜೈನ್ ಹೇಳಿದ್ದಾರೆ.
ಕಳೆದ ನವೆಂಬರ್‌ 30ರಂದು ಮ್ಯಾಕ್ಸ್ ಆಸ್ಪತ್ರೆಯಲ್ಲಿ ವರ್ಷಾ ಎಂಬುವವರಿಗೆ ಅವಧಿಪೂರ್ವ ಅವಳಿ ಮಕ್ಕಳು ಜನಿಸಿದ್ದರು. ಎರಡೂ ಮೃತಪಟ್ಟಿವೆ ಎಂದು ಹೇಳಿದ್ದ ಆಸ್ಪತ್ರೆ ಸಿಬ್ಬಂದಿ, ಆ ದೇಹಗಳನ್ನು ಪಾಲಿಥೀನ್‌ ಚೀಲದಲ್ಲಿ ಹಾಕಿ ಕುಟುಂಬದವರಿಗೆ ಹಸ್ತಾಂತರಿಸಿದ್ದರು. ಅವರು ಶಿಶುಗಳ ಅಂತ್ಯಸಂಸ್ಕಾರಕ್ಕೆ ಅಣಿಯಾಗುತ್ತಿದ್ದಂತೆಯೇ,  ಒಂದು ಮಗು ಉಸಿರಾಡುತ್ತಿದ್ದುದು ಗಮನಕ್ಕೆ ಬಂದಿತ್ತು. ನಂತರ, ಮತ್ತೊಂದು ನರ್ಸಿಂಗ್‌ ಹೋಮ್‌ಗೆ ಮಗುವನ್ನು ದಾಖಲಿಸಿದ್ದ ಪೋಷಕರು, ಮ್ಯಾಕ್ಸ್ ಆಸ್ಪತ್ರೆಯ ನಿರ್ಲಕ್ಷ್ಯ ಖಂಡಿಸಿ ಸಂಬಂಧಿಕರ ಜೊತೆಗೂಡಿ ಪ್ರತಿಭಟನೆ ನಡೆಸಿದ್ದರು. ಮಗು ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿತ್ತು.
ಪ್ರಕರಣದ ತನಿಖೆಗಾಗಿ ದೆಹಲಿ ಸರ್ಕಾರ ರಚಿಸಿದ್ದ ಸಮಿತಿಯು, ನವಜಾತ ಶಿಶುಗಳ ಆರೈಕೆ ವಿಷಯದಲ್ಲಿ ಮ್ಯಾಕ್ಸ್‌ ಆಸ್ಪತ್ರೆ ನಿಗದಿತ ಮಾನದಂಡಗಳನ್ನು ಪಾಲಿಸುತ್ತಿಲ್ಲ ಎಂದು ಹೇಳಿದೆ. ಹೀಗಾಗಿ ದೆಹಲಿ ಸರ್ಕಾರ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT