ನಾನಾ ಪಟೋಳೆ 
ದೇಶ

ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿಗೆ ಗುಡ್ ಬೈ ಹೇಳಿದ ನಾನಾ ಪಟೋಳೆ

ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನಿಸುವುದನ್ನು ಸಹಿಸುವುದಿಲ್ಲ ಎಂದಿದ್ದ ಮಹಾರಾಷ್ಟ್ರ ಬಿಜೆಪಿ ಸಂಸದ...

ನವದೆಹಲಿ/ಮುಂಬೈ: ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನಿಸುವುದನ್ನು ಸಹಿಸುವುದಿಲ್ಲ ಎಂದಿದ್ದ ಮಹಾರಾಷ್ಟ್ರ ಬಿಜೆಪಿ ಸಂಸದ ನಾನಾ ಪಟೋಳೆ ಅವರು ಶುಕ್ರವಾರ ತಮ್ಮ ಸಂಸದ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ತಾವು ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ಭಂಡಾರ-ಗೊಂಡಿಯಾ ಸಂಸದ ಪಟೋಳೆಯವರು ತಿಳಿಸಿದ್ದಾರೆ. ಅಲ್ಲದೆ ಬಿಜೆಪಿ ಅಧ್ಯಕ್ಷರಿಗೂ ರಾಜಿನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಸ್ಪೀಕರ್ ರಾಜಿನಾಮೆ ಪತ್ರ ಸಲ್ಲಿಸದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಳೆ ಅವರು, ನಾನು (ಬಿಜೆಪಿ) ಪಕ್ಷಕ್ಕೆ ಸೇರಿಕೊಂಡ ಉದ್ದೇಶಗಳನ್ನು ತಿರಸ್ಕರಿಸಲಾಗಿದೆ, ಆದರೆ ಈಗ ನಾನು ಸಂಪೂರ್ಣ ಸ್ವತಂತ್ರನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಪಕ್ಷದ ಸಂಸದರ ಸಭೆಯಲ್ಲಿ ತಾವು ಹಿಂದುಳಿದ ವರ್ಗಗಳ ಸಚಿವಾಲಯ ಮತ್ತು ರೈತರ ಆತ್ಮಹತ್ಯೆ ವಿಚಾರಗಳನ್ನು ಪ್ರಸ್ತಾಪಿಸಲು ಮುಂದಾದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಯಿ ಮುಚ್ಚಿಕೊಂಡಿರುವಂತೆ ಸೂಚಿಸಿದರು. ಅಲ್ಲದೇ, ನನ್ನ ಮೇಲೆ ಸಿಟ್ಟಿಗೆದ್ದರು ಎಂದಿದ್ದರು ಪಟೋಳೆ ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ