ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ 
ದೇಶ

ವನಬಂಧು ಯೋಜನೆಗೆ ಮೀಸಲಿಟ್ಟ ಹಣ ಎಲ್ಲಿ ಹೋಯಿತು ಪ್ರಧಾನಿಗಳೇ?: ರಾಹುಲ್ ಗಾಂಧಿಯ 10ನೇ ಪ್ರಶ್ನೆ

ಗುಜರಾತ್ ರಾಜ್ಯದಲ್ಲಿ ಆದಿವಾಸಿಗಳ ಸ್ಥಿತಿ ಶೋಚನೀಯವಾಗಿದೆ ಎಂದು ಹೇಳಿರುವ ಕಾಂಗ್ರೆಸ್ ಉಪಾಧ್ಯಕ್ಷ...

ನವದೆಹಲಿ: ಗುಜರಾತ್ ರಾಜ್ಯದಲ್ಲಿ ಆದಿವಾಸಿಗಳ ಸ್ಥಿತಿ ಶೋಚನೀಯವಾಗಿದೆ ಎಂದು ಹೇಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ವನಬಂಧು ಯೋಜನೆಗೆಂದು ಮೀಸಲಿಟ್ಟಿದ್ದ 55 ಸಾವಿರ ಕೋಟಿ ರೂಪಾಯಿ ಎಲ್ಲಿಗೆ ಹೋಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಣತಂತ್ರವಾಗಿ ಕಳೆದ ಹತ್ತು ದಿನಗಳಿಂದ ದಿನಕ್ಕೊಂದು ಪ್ರಶ್ನೆಯನ್ನು ಮೋದಿಯವರಿಗೆ ಕೇಳುತ್ತಾ ಬಂದಿದ್ದ ರಾಹುಲ್ ಗಾಂಧಿ ಇಂದು ಈ ಪ್ರಶ್ನೆ ಕೇಳಿದ್ದಾರೆ.
ಆದಿವಾಸಿಗಳ ಜಮೀನನ್ನು ಕಸಿದುಕೊಂಡು ಅರಣ್ಯದಲ್ಲಿ ಜೀವಿಸುವ ಅವರ ಹಕ್ಕನ್ನು ನಿರಾಕರಿಸಲಾಗಿದೆ. ಭೂಮಿಯ ಒಡೆತನಕ್ಕೆ ಇರುವ ಲಕ್ಷಾಂತರ ಕಾನೂನು ದಾಖಲೆಪತ್ರಗಳು ಜಾರಿಯಾಗದೆ ಹಾಗೆ ಉಳಿದುಕೊಂಡಿವೆ ಎಂದು ಟ್ವೀಟ್ ಮಾಡಿದ್ದಾರೆ.
ಆದಿವಾಸಿಗಳ ಮಕ್ಕಳಿಗಾಗಿ ಇರುವ ಶಾಲೆಗಳು ಕಾರ್ಯನಿರ್ವಹಿಸುತ್ತಿಲ್ಲ. ಅವರಿಗೆ ಆಸ್ಪತ್ರೆ, ಆರೋಗ್ಯ ಸೇವೆ ದೊರಕುತ್ತಿಲ್ಲ. ಮನೆಯಿಲ್ಲದ ನಿರಾಶ್ರಿತರಿಗೆ ವಸತಿ, ಉದ್ಯೋಗಗಳನ್ನು ಸರ್ಕಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಆದಿವಾಸಿಗಳ ಮೇಲಿನ ನಿರ್ಲಕ್ಷದಿಂದಾಗಿ ಅವರ ಪರಿಸ್ಥಿತಿ ದಯನೀಯವಾಗಿದೆ. ವನಬಂಧು ಯೋಜನೆಗೆಂದು ಘೋಷಿಸಿದ 55 ಸಾವಿರ ಕೋಟಿ ರೂಪಾಯಿ ಎಲ್ಲಿಗೆ ಹೋಯಿತು ಮೋದಿಯವರೆ ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.
 ವನಬಂಧು ಯೋಜನೆಯನ್ನು 2014ರಲ್ಲಿ ಕೇಂದ್ರ ಸರ್ಕಾರ ದೇಶದ ಬುಡಕಟ್ಟು ಜನಾಂಗದವರ ಏಳಿಗೆ ಮತ್ತು ಒಟ್ಟಾರೆ ಅಭಿವೃದ್ಧಿಗೆ ಜಾರಿ ತಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT