ಸೂರತ್ ನಲ್ಲಿ ತನ್ನ ಹಕ್ಕು ಚಲಾಯಿಸಿದ ವೃದ್ಧ ಮಹಿಳೆ 
ದೇಶ

ಗುಜರಾತ್ ಚುನಾವಣೆ: ಮೊದಲ ಹಂತದಲ್ಲಿ ಶೇ.68 ರಷ್ಟು ಮತದಾನ

ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್​ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ.....

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್​ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದ್ದು, ಸಂಜೆ 5 ಗಂಟೆಯವರೆಗೆ ಶೇ.68ರಷ್ಟು ಮತದಾನವಾಗಿದ್ದು, ಶೇ.70 ದಾಟುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಉಪ ಚುನಾವಣಾ ಆಯುಕ್ತ ಉಮೇಶ್ ಸಿನ್ಹಾ ಅವರು, ಇನ್ನೂ ಕೆಲವು ಮತಗಟ್ಟೆಗಳಲ್ಲಿ ಜನರು ಸಾಲುಗಟ್ಟಿ ನಿಂತಿದ್ದು, ಅವರೆಲ್ಲರಿಗೂ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಗುಜರಾತ್ ನಲ್ಲಿ ಮತಯಂತ್ರಗಳನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಚುನಾವಣಾ ಆಯೋಗ ನಿರಾಕರಿಸಿದ್ದು, ಪೋರ್ಬಂದರ್ ನ ಕೆಲವು ಮತಗಟ್ಟೆಗಳ ಮತಯಂತ್ರಗಳಲ್ಲಿ ಬ್ಲೂಟೂತ್ ಹಾಗೂ ವೈಫೈ ಲಿಂಕ್ ಆಗಿದೆ ಎಂಬ ಆರೋಪ ಕೇಳಿಬಂದಿತ್ತು, ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಆದರೆ ಮತಯಂತ್ರಗಳನ್ನು ದುರ್ಬಳಕೆಯಾಗಿಲ್ಲ ಎಂದು ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಮೊದಲ ಹಂತದಲ್ಲಿ 19 ಜಿಲ್ಲೆಗಳ ಒಟ್ಟು 89 ಸ್ಥಾನಗಳಿಗೆ ಇಂದು ಮತದಾನ ನಡೆದಿದ್ದು, ಕೆಲವು ಸಣ್ಣಪುಟ್ಟ ತಾಂತ್ರಿಕ ದೋಷ ಬಿಟ್ಟರೆ ಮತದಾನ ಬಹುತೇಕ ಶಾಂತಿಯುತವಾಗಿ ಅಂತ್ಯಗೊಂಡಿದೆ.
ಸೂರತ್ ಸೇರಿದಂತೆ ಕೆಲವು ಕಡೆ ಮತ ಯಂತ್ರದಲ್ಲಿ ತಾಂತ್ರಿಕ ತೊಂದರೆ ಕಂಡು ಬಂದಿದೆ ಎಂದು ಪ್ರತಿಕ್ಷಗಳು ಆರೋಪಿಸಿವೆ. ಕಾಂಗ್ರೆಸ್​ನ ಹಿರಿಯ ನಾಯಕ ಅಹ್ಮದ್​ ಪಟೇಲ್​ ಸ್ಫರ್ಧಿಸುತ್ತಿರುವ ಕ್ಷೇತ್ರ ಸೂರತ್​ನಲ್ಲಿ ಮತ ಯಂತ್ರದಲ್ಲಿ ಸಮಸ್ಯೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಟ್ವೀಟ್​ ಮೂಲಕ ಚುನಾವಣಾ ಆಯೋಗಕ್ಕೂ ತಿಳಿಸಿದ್ದರು.
ಕೂಡಲೆ ಕ್ರಮ ತೆಗೆದುಕೊಂಡ ಆಯೋಗ ತೊಂದರೆಗಳನ್ನು ಸರಿಪಡಿಸಿದ್ದು, ಈಗ ಯಾವುದೇ ತೊಂದರೆ ಇಲ್ಲದೆ ಮತದಾನ ನಡೆಯುತ್ತಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿತ್ತು. ಸೂರತ್​ನಲ್ಲಿ 70, ಪೋರಬಂದರ್​ನಲ್ಲಿ 8, ವಲ್ಸಾದ್​ನಲ್ಲಿ 5, ಅಮ್ರೇಲಿಯಲ್ಲಿ 3 ಹಾಗೂ ರಾಜ್​ಕೋಟ್​​ನಲ್ಲೂ 3 ಮತ ಯಂತ್ರಗಳಲ್ಲಿ ತೊಂದರೆ ಕಂಡುಬಂದಿತ್ತು.
ಮತದಾನಕ್ಕಾಗಿ ಒಟ್ಟು 24,689 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 19 ಜಿಲ್ಲೆಗಳ ಒಟ್ಟು 2,12,31,652 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1,11,05,933 ಪುರುಷ ಮತದಾರರಿದ್ದು, 1,01,25,472 ಮಹಿಳಾ  ಮತದಾರರಿದ್ದಾರೆ. ಇನ್ನು 247 ಮಂದಿ ತೃತೀಯ ಲಿಂಗಿಗಳೂ ಕೂಡ ಇಂದು ಮತದಾನ ಮಾಡುತ್ತಿರುವುದು ವಿಶೇಷವಾಗಿದೆ. ಸಂಜೆ 5 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್14  ರಂದು ನಡೆಯಲಿದೆ.
ಬಿಜೆಪಿಯದ್ದೇ ಪಾರಮ್ಯ
ಪ್ರಸ್ತುತ 89 ಕ್ಷೇತ್ರಗಳ ಪೈಕಿ ಆಡಳಿತಾರೂಢ ಬಿಜೆಪಿ ಪಕ್ಷವೇ ಅತೀ ಹೆಚ್ಚು ಶಾಸಕರು ಅಂದರೆ 67 ಕ್ಷೇತ್ರಗಳನ್ನು ಹೊಂದಿದ್ದು, ಕಾಂಗ್ರೆಸ್ 16 ಮತ್ತು ಎನ್ ಸಿಪಿ ಮತ್ತು ಜೆಡಿಯು ತಲಾ ಒಂದೊಂದು ಸ್ಥಾನಗಳಿಸಿವೆ.  ಉಳಿದೆರಡು  ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT