ಸೋನಿಯಾ ಗಾಂಧಿ ಜನ್ಮ ದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 71 ನೇ ಹುಟ್ಟುಹಬ್ಬದಂದು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಸೋನಿಯಾ ಗಾಂಧಿ ದೀರ್ಘಾಯಸ್ಸು ಹಾಗೂ ಆರೋಗ್ಯವಾಗಿರಲಿ ಎಂದು ಮೋದಿ ಟ್ವಿಟ್ಟರ್ ನಲ್ಲಿ ಶುಭಾಶಯ ಕೋರಿದ್ದಾರೆ.
"ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ನಾನು ಅವರ ಸುದೀರ್ಘ ಆಯಸ್ಸು ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
1998 ರಲ್ಲಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಸೋನಿಯಾ ಗಾಂಧಿಯವರ ಜನ್ಮ ದಿನವನ್ನು ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ದೆಹಲಿಯ 10 ಜನಪಥ್ ರಸ್ತೆಯಲ್ಲಿ ಸಂಭ್ರಮದಿಂದ ಆಚರಿಸಲು ಸಿದ್ದರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ನಲ್ಲಿಯೂ ಪಕ್ಷದ ಮುಖ್ಯಸ್ಥರ ಹುಟ್ಟು ಹಬ್ಬಕ್ಕೆ ಶುಭ ಹಾರೈಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics