ನಾನಾ ಪಟೋಳೆ 
ದೇಶ

ಪ್ರಧಾನಿ ಮೋದಿ ರಾಜಕೀಯ ಲಾಭಕ್ಕಾಗಿ ಒಬಿಸಿ ಕಾರ್ಡ್ ಬಳಸುತ್ತಿದ್ದಾರೆ: ನಾನಾ ಪಟೋಳೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ಒಬಿಸಿ ಕಾರ್ಡ್ ಬಳಸುತ್ತಿದ್ದಾರೆ ಎಂದು ನಿನ್ನೆ ಸಂಸದ ಹಾಗೂ ಬಿಜೆಪಿಗೆ....

ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ಒಬಿಸಿ ಕಾರ್ಡ್ ಬಳಸುತ್ತಿದ್ದಾರೆ ಎಂದು ನಿನ್ನೆ ಸಂಸದ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿದ ನಾನಾ ಪಟೋಳೆ ಅವರು ಶನಿವಾರ ಆರೋಪಿಸಿದ್ದಾರೆ.
ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಟೋಳೆ ಅವರು, ಬಿಜೆಪಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ದ್ವಿಮುಖ ನಿಲುವು ಹೊಂದಿದ್ದು, ರಾಜಕೀಯ ಲಾಭಕ್ಕಾಗಿ ಹಿಂದೂಳಿದ ವರ್ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ಒಬಿಸಿಗೆ ಮತ್ತು ರೈತರಿಗಾಗಿ ಯಾವುದೇ ಕೆಲಸ ಮಾಡಿಲ್ಲ ಪಟೋಳೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಳೆದ ವರ್ಷ ನಡೆದ ಪಕ್ಷದ ಸಂಸದರ ಸಭೆಯಲ್ಲಿ ನಾನು ಹಿಂದೂಳಿದ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದೆ. ಅಲ್ಲದೆ ಒಬಿಸಿಗೆ ಪ್ರತ್ಯೇಕ ಸಚಿವಾಲಯ ಬೇಕು ಎಂದು ಒತ್ತಾಯಿಸಿದ್ದೆ. ಇದರಿಂದ ಆಕ್ರೋಶಗೊಂಡ ಮೋದಿ, ಒಬಿಸಿಗೆ ಪ್ರತ್ಯೇಕ ಸಚಿವಾಲಯದ ಅಗತ್ಯ ಇಲ್ಲ ಎಂದಿದ್ದರು. ಆದರೆ ಈಗ ಒಬಿಸಿ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ ಎಂದು ಪಟೋಳೆ ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ