ನವದೆಹಲಿ: ಲವ್ ಜಿಹಾದ್ ಆರೋಪದಡಿ ವ್ಯಕ್ತಿಯನ್ನು ದಹಿಸಿದ ಘಟನೆ ಹಿನ್ನೆಲೆಯಲ್ಲಿ ಎಂಐಎಂ ನ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರೆಂಬ ಒಂದೇ ಕಾರಣಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ನಮ್ಮದೇ ದೇಶದಲ್ಲಿ ನಮ್ಮವರನ್ನು ಮುಸ್ಲಿಮರೆಂಬ ಒಂದೇ ಕಾರಣಕ್ಕೆ ಟಾರ್ಗೆಟ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಇಂತಹ ಮನಸ್ಥಿತಿಯುಳ್ಳವರನ್ನು ಉತ್ತೇಜಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಈ ರೀತಿಯ ಕೃತ್ಯಗಳು ಹೆಚ್ಚುತ್ತಿದೆ ಎಂದು ಒವೈಸಿ ಆರೋಪಿಸಿದ್ದಾರೆ.
ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ ಲವ್ ಜಿಹಾದ್ ನಡೆಸಿದ ಆರೋಪದಡಿ ಓರ್ವ ಕಾರ್ಮಿಕನನ್ನು ದಹಿಸಿ ಹತ್ಯೆ ಮಾಡಲಾಗಿತ್ತು.