ಡಿಸೆಂಬರ್ 16ರಂದು ರಾಹುಲ್ ಗಾಂಧಿಗೆ 'ಕೈ' ಪಟ್ಟಾಭಿಷೇಕ?
ನಿರೀಕ್ಷೆಯಂತೆಯೇ ಎಐಎಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷದ ಅಧಿಪತ್ಯ ವಹಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇದೇ ಡಿಸೆಂಬರ್ 16ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನವದೆಹಲಿ: ನಿರೀಕ್ಷೆಯಂತೆಯೇ ಎಐಎಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷದ ಅಧಿಪತ್ಯ ವಹಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇದೇ ಡಿಸೆಂಬರ್ 16ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಆ ಮೂಲಕ ಕಳೆದೆರಡು ದಶಕಗಳಿಂದ ಕಾಂಗ್ರೆಸ್ ಪಕ್ಷವನ್ನು ಆಳಿದ್ದ ಸೋನಿಯಾಗಾಂಧಿ ಅವರ ಯುಗಾಂತ್ಯ ಸನಿಹವಾಗಿದ್ದು, 47 ವರ್ಷದ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧಿಪತ್ಯವಹಿಸಲಿದ್ದಾರೆ. ಮೂಲಗಳ ಪ್ರಕಾರ ನಾಳೆಯೇ ಅಂದರೆ ಸೋಮವಾರ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾರಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಲು ನಾಳೆಯೇ ಅಂತಿಮ ದಿನವಾಗಿದ್ದು, ಈ ವರೆಗೂ ರಾಹುಲ್ ಗಾಂಧಿ ಅವರನ್ನು ಹೊರತು ಪಡಿಸಿದರೆ ಈ ವರೆಗೂ ಬೇರಾವುದೇ ನಾಯಕರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ.
ಹೀಗಾಗಿ ರಾಹುಲ್ ಗಾಂಧಿ ಅವರೇ ಅವಿರೋಧವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.
ಈ ಹಿಂದೆಯೇ ರಾಹುಲ್ ಗಾಂಧಿ ಅವರನ್ನು ಈ ಹಿಂದೆಯೇ ಪಕ್ಷದ ಅಧ್ಯಕ್ಷ ಹುದ್ದೆಗೇರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತಾದರೂ, ಪಕ್ಷದ ಕೆಲ ಕಾರ್ಯಕರ್ತ ರಾಹುಲ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಪ್ರಿಯಾಂಕಾ ಗಾಂಧಿ ಅವರನ್ನು ಅಧ್ಯಕ್ಷರಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಹಿಂದಿನ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲುಕಂಡಿತ್ತು. ಇದು ರಾಹುಲ್ ರನ್ನು ಅಧ್ಯಕ್ಷರಾಗುಪುದಕ್ಕೆ ತಡೆಯಾಗಿತ್ತು. ಆದರೆ ಇದೀಗ ರಾಹುಲ್ ರನ್ನು ಅಧ್ಯಕ್ಷಗಾದಿಗೇರಿಸಲು ಸೂಕ್ತ ಸಮಯ ಎಂದು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷ ಇದೇ ಡಿಸೆಂಬರ್ ನಲ್ಲಿ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ.