ಸಾಂದರ್ಭಿಕ ಚಿತ್ರ 
ದೇಶ

ಕ್ಯಾನ್ಸರ್ ಸಂತ್ರಸ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ನೆರವಿಗೆ ಬಂದಾತನಿಂದಲೂ ಲೈಂಗಿಕ ದೌರ್ಜನ್ಯ!

ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, ನೆರವಿಗಾಗಿ ದಾರಿಹೋಕರನ್ನು ಆಕೆ ಯಾಚಿಸಿದಾಗ ಆತ ಕೂಡ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖನೌ: ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, ನೆರವಿಗಾಗಿ ದಾರಿಹೋಕರನ್ನು ಆಕೆ ಯಾಚಿಸಿದಾಗ ಆತ ಕೂಡ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ  ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಉತ್ತರ ಪ್ರದೇಶದ ಸರೋಜಿನಿ ನಗರದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬಾಲಕಿ ದಿನಸಿ ಆಂಗಡಿಗೆ ತೆರಳಿದ್ದಾಗ ನೆರವು ನೀಡುವ ನೆಪದಲ್ಲಿ ಕರೆದೊಯ್ದ ಇಬ್ಬರು ಯುವಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ  ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ಬಳಿಕ ಇಬ್ಬರೂ ಅಲ್ಲಿಂದ ಪರಾರಿಯಾಗಿದ್ದ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿ ನೆರವಿಗಾಗಿ ಅಲ್ಲಿಯೇ ಸಮೀಪದಲ್ಲಿ ಹಾದು ಹೋಗುತ್ತಿದ್ದ ದಾರಿಹೋಕನೋರ್ವನನ್ನು ಯಾಚಿಸಿದ್ದು,  ಬಾಲಕಿಯ ಅಸಹಾಯಕ ಸ್ಥಿತಿಯನ್ನು ಕಂಡ ಆತ ಕೂಡ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಬಳಿಕ ಕೆಲ ಹೊತ್ತಿನ ಬಳಿಕ ಸುಧಾರಿಸಿಕೊಂಡ ಬಾಲಿಕ ಅದೇ ಸ್ಥಿತಿಯಲ್ಲಿ ಮನೆಗೆ ತೆರಳಿ ಪೋಷಕರಿಗೆ ನಡೆದ ವಿಚಾರ ತಿಳಿಸಿದ್ದು, ಕೂಡಲೇ ಪೋಷಕರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದಾರೆ. ಪ್ರಕರಣ  ದಾಖಲಿಸಿಕೊಂಡಿರುವ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಈ ಪೈಕಿ ವಿರೇಂದ್ರ ಯಾದವ್ ಎಂಬ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವನಿಗಾಗಿ ಶೋಧ ನಡೆಸಿದ್ದಾರೆ. ಅಂತೆಯೇ  ಸಹಾಯ ಯಾಚಿಸಿದ ಬಾಲಕಿ ಮೇಲೆ ಮತ್ತೆ ಅತ್ಯಾಚಾರ ನಡೆಸಿದ ಮೂರನೇ ವ್ಯಕ್ತಿ ನಾಪತ್ತೆಯಾಗಿದ್ದು, ಆತನ ಬಂಧನಕ್ಕೂ ಬಲೆ ಬೀಸಲಾಗಿದೆ ಎಂದು ಸರೋಜಿನಿ ನಗರದ ವೃತ್ತ ನಿರೀಕ್ಷಕ ಲಲ್ಟಾ ಪ್ರಸಾದ್ ಸಿಂಗ್ ಮಾಹಿತಿ  ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!