ಪ್ರಜಾಪ್ರಭುತ್ವದ ಬಗ್ಗೆ ನಿಮ್ಮಿಂದ ಪಾಠ ಕಲಿಬೇಕಾಗಿಲ್ಲ: ಪಾಕ್ ಗೆ ಮೋದಿ ಸರ್ಕಾರ ತಿರುಗೇಟು
ಪ್ರಜಾಪ್ರಭುತ್ವದ ಬಗ್ಗೆ ನಿಮ್ಮಿಂದ ಪಾಠ ಕಲಿಬೇಕಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೋಮವಾರ ಪಾಕಿಸ್ತಾನಕ್ಕೆ ತಿರುಗೇಟು....
ನವದೆಹಲಿ: ಪ್ರಜಾಪ್ರಭುತ್ವದ ಬಗ್ಗೆ ನಿಮ್ಮಿಂದ ಪಾಠ ಕಲಿಬೇಕಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೋಮವಾರ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.
ಪಾಕಿಸ್ತಾನದ ಹೆಸರು ದುರ್ಬಳಕೆ ಮಾಡಿಕೊಳ್ಳದೇ ನಿಮ್ಮ ಸ್ವಂತ ಸಾಮರ್ಥ್ಯದಿಂದ ಗುಜರಾತ್ ಚುನಾವಣೆ ಗೆಲ್ಲಿ... ಚುನಾವಣಾ ಗೆಲುವಿಗಾಗಿ ಪಾಕಿಸ್ತಾನದ ಹೆಸರು ದುರ್ಬಳಕೆ ಬೇಡ ಎಂದು ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದ ಪಾಕಿ ವಿದೇಶಾಂಗ ಸಚಿವ ಮೊಹಮ್ಮದ್ ಪೈಸಾಲ್ ಅವರ ಹೇಳಿಕೆಯನ್ನು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ನಮಗೆ ಬುದ್ಧಿ ಹೇಳುವುದನ್ನು ಪಾಕ್ ಮೊದಲು ನಿಲ್ಲಿಸಲಿ ಎಂದಿದ್ದಾರೆ.
ಭಾರತದ ಆಂತರಿಕ ವ್ಯವಹಾರಗಳಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುವುದು ಅಸಹ್ಯ. ಭಾರತದಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನ ಪ್ರೋತ್ಸಾಹ ನೀಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಪ್ರಜಾಪ್ರಭುತ್ವದ ಬಗ್ಗೆ ನಾವು ನಿಮ್ಮಿಂದ ಪಾಠ ಕಲಿಬೇಕಾಗಿಲ್ಲ. ನಮ್ಮ ಪ್ರಜಾಪ್ರಭುತ್ವದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ನಿನ್ನೆ ಗುಜರಾತ್ ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಗುಜಾರಾತ್ ಚುನಾವಣೆಯಲ್ಲಿ ಪಾಕ್ ಹಸ್ತಕ್ಷೇಪ ಮಾಡುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ್ದರು.
ಪ್ರಧಾನಿ ಮೋದಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದ ಪಾಕಿಸ್ತಾನ, ಚುನಾವಣೆಗಳನ್ನು ನಿಮ್ಮ ಸ್ವಂತ ಸಾಮರ್ಥ್ಯದಿಂದ ಗೆಲ್ಲಬೇಕೇ ಹೊರತು ಇದಕ್ಕಾಗಿ ಪಾಕಿಸ್ತಾನದ ಹೆಸರು ದುರ್ಬಳಕೆ ಸರಿಯಲ್ಲ. ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅಲ್ಲಿನ ರಾಜಕಾರಣಿಗಳ ಪಾಕಿಸ್ತಾನ ಕುರಿತ ಹೇಳಿಕೆಗಳು ಸತ್ಯಕ್ಕೆ ದೂರವಾದದ್ದು ಮತ್ತು ಬೇಜವಾಬ್ದಾರಿಯುತವಾದದ್ದು ಎಂದು ಫೈಸಾಲ್ ಟ್ವೀಟ್ ಮಾಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.