ಗುಜರಾತ್ ನಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವಿದೆ: ರಾಹುಲ್ ಗಾಂಧಿ
ಗುಜರಾತ್ ನಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅಹಮದಾಬಾದ್: ಗುಜರಾತ್ ನಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಜೆಪಿ ಗುಜರಾತ್ ನಲ್ಲಿ ತನ್ನ ಸ್ಥಾನ ಕಳೆದುಕೊಂಡಿದೆ. ಗುಜರಾತ್ ನಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡಿದ್ದು, ಸರ್ಕಾರ ರಚಿಸುವ ವಿಶ್ವಾಸ ನಮಗೆ ಇದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಡಿ.14 ರಂದು 2 ನೇ ಹಂತದ ಮತದಾನ ನಡೆಯಲಿದ್ದು, ಡಿ.18 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮೌನವಾಗಿದೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲೆಡೆ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿದ್ದರು. ಜಯ್ ಷಾ ಪ್ರಕರಣದ ನಂತರ ಪ್ರಧಾನಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದನ್ನೇ ನಿಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ನ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.