ದೇಶ

ಶಾಸಕ, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ವಿಚಾರಣೆಗಾಗಿ ವಿಶೇಷ ಕೋರ್ಟ್ ಗಳ ಸ್ಥಾಪನೆಗೆ ಕೇಂದ್ರದ ಒಪ್ಪಿಗೆ

Srinivas Rao BV
ನವದೆಹಲಿ: ಶಾಸಕರು, ಸಂಸದರ ವಿರುದ್ಧ ಇರುವ ಕ್ರಿಮಿನಲ್ ಕೇಸ್ ಗಳ ವಿಚಾರಣೆಗೆ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. 
ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ಕೇಂದ್ರ ಸರ್ಕಾರ ವಿಶೇಷ ಕೋರ್ಟ್ ಗಳನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದೆ. 2014 ರಲ್ಲಿ ಒಟ್ಟು 1,581 ಜನ ಪ್ರತಿನಿಧಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು. ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಆರೋಪಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಚಾರಣೆ ವಿಳಂಬವಾಗುತ್ತಿರುವುದನ್ನು ವಿಶೇಷ ಕೋರ್ಟ್ ಗಳ ಸ್ಥಾಪನೆ ಮೂಲಕ  ತಡೆಯಬಹುದಾಗಿದೆ. 
ಪ್ರಾರಂಭದಲ್ಲಿ 12 ವಿಶೇಷ ಕೋರ್ಟ್ ಗಳನ್ನು ಸ್ಥಾಪನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿದ್ದು, ಇದಕ್ಕಾಗಿ 7.80 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡುವುದಾಗಿ ಹೇಳಿದೆ. 
SCROLL FOR NEXT