ನವದೆಹಲಿ: ಗುಜರಾತ್ ನ ವಿಧಾನಸಭಾ ಚುನಾವಣೆಗೆ ಡಿ.14 ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನತೆಗೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಗುಜರಾತ್ ನಲ್ಲಿಯೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಮತ್ತಷ್ತು ಬಲ ಬರುತ್ತದೆ. ಈ ವಿಷಯದಲ್ಲಿ 1+1=2 ಅಲ್ಲ, 1+1 11 ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಗುಜರಾತ್ ನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಹುದು ಎಂದು ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
3 ವರ್ಷಗಳ ನಂತರ ಗುಜರಾತ್ ಗೆ ಭೇಟಿ ನೀಡುತ್ತಿದ್ದು, ಇಲ್ಲಿನ ಜನತೆ ಅತ್ಯಂತಪ್ರೀತಿ ತೋರಿದ್ದಾರೆ, ಅವರ ಪ್ರೀತಿ ಆದರಗಳು ನನಗೆ ಭಾರತದ ಅಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ನೀಡಲಿವೆ ಎಂದು ಹೇಳಿದ್ದಾರೆ.