ವಿಜಯ್ ಮಲ್ಯ 
ದೇಶ

ವಿಜಯ್ ಮಲ್ಯ ಹಸ್ತಾಂತರ ವಿಳಂಬ: ಕೇಂದ್ರ, ವಿದೇಶಾಂಗ ಸಚಿವಾಲಯಕ್ಕೆ ಸುಪ್ರೀಂ ತರಾಟೆ

ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ...

ನವದೆಹಲಿ: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರ ಹಸ್ತಾಂತರ ವಿಳಂಬವಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಕೇಂದ್ರ ಹಾಗೂ ವಿದೇಶಾಂಗ ಸಚಿವಾಲಯವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಇಂದು ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಕಾನೂನು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಗಡೀಪಾರು ವಿಚಾರದಲ್ಲಿ ಅಸಹಕಾರದ ಹಿಂದಿನ ಕಾರಣಗಳೇನು? ಕೋರ್ಟ್​​ನ ಆದೇಶವನ್ನು ಗಂಭೀರವಾಗಿ ಪರಿಗಣಿಸದಿರುವುದು ಏಕೆ? ಎಂದು ಪ್ರಶ್ನಿಸಿದೆ.
ಇಂತಹ ಪ್ರಕರಣಗಳಲ್ಲಿ ಮತ್ತೆ ವಿಳಂಬ ಮಾಡದಂತೆ ಎಚ್ಚರಿಕೆ ನೀಡಿದ ಕೋರ್ಟ್, ಡಿಸೆಂಬರ್ 15ರ ಒಳಗೆ ವರದಿ ನೀಡುವಂತೆ ವಿದೇಶಾಂಗ ಇಲಾಖೆಗೆ ನಿರ್ದೇಶಿಸಿದೆ. ಅಲ್ಲದೇ, ವರದಿ ನೀಡಲು ವಿಳಂಬ ಮಾಡದಂತೆಯೇ ಸೂಚಿಸಿದ್ದು, ಒಂದು ವೇಳೆ ವಿಳಂಬವಾದಲ್ಲಿ ವಿದೇಶಾಂಗ ಇಲಾಖೆ ಕಾರ್ಯದರ್ಶಿಗೆ ಸಮನ್ ಜಾರಿಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.
ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್, ವಂಚನೆ ಹಾಗೂ ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಡಿಸೆಂಬರ್ 14ರ ವರೆಗೆ ನಡೆಯಲಿದೆ. ಬಳಿಕ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಕೋರ್ಟ್ ತನ್ನ ನಿರ್ಧಾರ ಪ್ರಕಟಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ