ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಾಕಿಸ್ತಾನದ ಹಸ್ತಕ್ಷೇಪವಿದೆ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆರೋಪವನ್ನು ಟೀಕಿಸಿರುವ ಪಾಟಿದಾರ್ ಅನಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಮೋದಿಯವರಂತಹ ದುರ್ಬಲ ಪ್ರಧಾನ ಮಂತ್ರಿಯನ್ನು ಹೊಂದಿರುವುದು ನಮ್ಮ ದೌರ್ಭಾಗ್ಯ ಎಂದಿದ್ದಾರೆ.
ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಕಳೆದ 70 ವರ್ಷಗಳಲ್ಲಿ ಭಾರತಕ್ಕೆ ಯಾವುದೇ ಹಾನಿ ಮಾಡಲು ಸಾಧ್ಯವಾಗದ ಪಾಕಿಸ್ತಾನದ ಬಗ್ಗೆ ಪ್ರಧಾನ ಮಂತ್ರಿಯಾಗಿ ದೇಶದ ಜನತೆಯಲ್ಲಿ ನೆರೆ ರಾಷ್ಟ್ರದ ಬಗ್ಗೆ ಭಯ ಹುಟ್ಟಿಸುತ್ತಿದ್ದಾರೆ ಎಂದರು.
ಕಳೆದ ಭಾನುವಾರ ಗುಜರಾತ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ಮೋದಿಯವರು, ಗುಜರಾತ್ ಚುನಾವಣೆಯಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಿದೆ. ಇತ್ತೀಚೆಗೆ ಪಾಕಿಸ್ತಾನದ ನಾಯಕರನ್ನು ಇತ್ತೀಚೆಗೆ ಕಾಂಗ್ರೆಸ್ ನ ಉನ್ನತ ನಾಯಕರು ಏಕೆ ಭೇಟಿ ಮಾಡಿದರೆಂದು ವಿವರಣೆ ನೀಡಬೇಕೆಂದು ಒತ್ತಾಯಿಸಿದ್ದರು.