ಕಪ್ಪು ಬಣ್ಣಕ್ಕೆ ತಿರುಗಿದ ಬ್ರಹ್ಮಪುತ್ರ ನದಿ: ಚೀನಾ ವಿದೇಶಾಂಗ ಸಚಿವರೊಂದಿಗೆ ಆತಂಕ ವ್ಯಕ್ತಪಡಿಸಿದ ಎಂಇಎ
ಬ್ರಹ್ಮಪುತ್ರ ನದಿ ಕಪ್ಪು ಬಣ್ಣಕ್ಕೆ ತಿರುಗುತ್ತಿರುವುದರ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ಚೀನಾದ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು ಆತಂಕ ವ್ಯಕ್ತಪಡಿಸಿದೆ.
ನವದೆಹಲಿ: ಬ್ರಹ್ಮಪುತ್ರ ನದಿ ಕಪ್ಪು ಬಣ್ಣಕ್ಕೆ ತಿರುಗುತ್ತಿರುವುದರ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ಚೀನಾದ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು ಆತಂಕ ವ್ಯಕ್ತಪಡಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಎಂಇಎ ವಕ್ತಾರ ರವೀಶ್ ಕುಮಾರ್, ಬ್ರಹ್ಮಪುತ್ರ ನದಿ ಕಪ್ಪು ಬಣ್ಣಕ್ಕೆ ತಿರುಗಿರುವುದು ಆತಂಕದ ಸಂಗತಿಯಾಗಿದ್ದು, ಈ ವಿಷಯವನ್ನು ಚೀನಾದ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ.
ಬ್ರಹ್ಮಪುತ್ರ ನದಿಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯೊಂದಿಗೂ ಸಹಕರಿಸುತ್ತಿದ್ದೇವೆ ಎಂದು ರವೀಶ್ ಕುಮಾರ್ ಹೇಳಿದ್ದಾರೆ. ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವೇಳೆ ಸುಷ್ಮಾ ಸ್ವರಾಜ್ ಅವರು ಬ್ರಹ್ಮಪುತ್ರ ನದಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಬ್ರಹ್ಮಪುತ್ರ ನದಿಯಲ್ಲಿ ವಿಷಕಾರಿ ಅಂಶಗಳು ಹೆಚ್ಚುತ್ತಿರುವುದಕ್ಕೆ ಕಾರಣವೇನೆಂಬುದನ್ನು ತಿಳಿದುಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ ಬೆನ್ನಲ್ಲೇ ಎಂಇಎ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.