ದೇಶ

ಚುನಾವಣಾ ಆಯೋಗಕ್ಕೆ ಲಂಚ ಪ್ರಕರಣ: ಪೂರಕ ಚಾರ್ಜ್ ಶೀಟ್ ನಲ್ಲಿ ದಿನಕರನ್ ಆರೋಪಿ

Lingaraj Badiger
ನವದೆಹಲಿ: ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ದೆಹಲಿ ಪೊಲೀಸರು ಪೂರಕ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕ ಟಿಟಿವಿ ದಿನಕರನ್ ಆರೋಪಿಯನ್ನಾಗಿ ಮಾಡಲಾಗಿದೆ.
ದೆಹಲಿ ಪೊಲೀಸರು ಇಂದು 272 ಪುಟಗಳ ಪೂರಕ ಚಾರ್ಜ್ ಶೀಟ್ ಅನ್ನು ಹೆಚ್ಚು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಕಿರಣ್ ಬನ್ಸಾಲ್ ಅವರಿಗೆ ಸಲ್ಲಿಸಿದ್ದು, ಡಿಸೆಂಬರ್ 21ರಂದು ಅದನ್ನು ಪರಿಗಣಿಸುವ ಸಾಧ್ಯತೆ ಇದೆ.
ದಿನಕರನ್, ಮಧ್ಯವರ್ತಿ ಸುಕೇಶ್ ಚಂದ್ರಶೇಖರ್, ದಿನಕರನ್ ಬಹುದಿನಗಳ ಗೆಳೆಯ ಮಲ್ಲಿಕಾರ್ಜನ್ ಹಾಗೂ ಇತರೆ ಆರು ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಕಳೆದ ಜುಲೈನಲ್ಲಿ ದೆಹಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ದಿನಕರನ್ ಅವರ ಹೆಸರು ಇರಲಿಲ್ಲ. ಆದರೆ ಇಂದು ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ನಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.
ಎಐಎಡಿಎಂಕೆಯ ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ದಿನಕರನ್ ಅವರನ್ನು ದೆಹಲಿ ಪೊಲೀಸರು ಕಳೆದ ಏಪ್ರಿಲ್ ನಲ್ಲಿ ಬಂಧಿಸಿದ್ದರು. ಈಗ ಜಾಮೀನಿನ ಮೇಲೆ ಹೊರಗಡೆ ಇರುವ ದಿನಕರನ್ ಅವರು ಚೆನ್ನೈ ಆರ್ ಕೆ ನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. 
SCROLL FOR NEXT