ನವದೆಹಲಿ: ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್ ಪುತ್ರ ಶೌರ್ಯ ದೋವಲ್ ಪಾಕಿಸ್ತಾನದ ಉದ್ಯಮಿ ಜತೆ ಪಾಲುದಾರಿಕೆಯನ್ನು ಹೊಂದಿರುವುದಕ್ಕೆ ಬಿಜೆಪಿ ಯಾಕೆ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೌತ್ ಕಾ ಸೌದಾಗರ್ ಎಂದು ನಿಂದಿಸಿದ್ದನ್ನು ನೆನಪಿಸಿದರು. ಅಲ್ಲದೆ ಮನಮೋಹನ್ ಸಿಂಗ್ ಅಧಿಕಾರವಧಿಯಲ್ಲಿ ಕಾಂಗ್ರೆಸ್ ಮುಖಂಡರು ದೇಶವನ್ನೇ ಲೂಟಿ ಹೊಡೆಯುತ್ತಿದ್ದಾಗ ಈ ಸಿಟ್ಟನ್ನು ಏಕೆ ಪ್ರದರ್ಶಿಸಲಿಲ್ಲ ಎಂದು ಪ್ರಶ್ನಿಸಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಗುಜರಾತ್ ನಲ್ಲಿನ ಅಭಿವೃದ್ಧಿಯ ಕುರಿತು ಕಾಂಗ್ರೆಸ್ ಪ್ರಶ್ನೆಗಳಿಗೆ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸುತ್ತಿದ್ದಾರೆ. ಆದರೆ ಅಮಿತ್ ಶಾ ಅವರು ಪುತ್ರ ಜೈಷಾ ಅವರ ವ್ಯವಹಾರಗಳ ಬಗ್ಗೆ ಯಾರು ಉತ್ತರಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಗುಜರಾತ್ ನಲ್ಲಿ ಬಿಜೆಪಿ ಸೋತರೆ ಪಾಕಿಸ್ತಾನದಲ್ಲಿ ಪಟಾಕಿಗಳು ಸಿಡಿಯುತ್ತವೆ ಎಂದು ಅಮಿತ್ ಶಾ ಅವರು ಹೇಳಿದ್ದಾರೆ. ಆದರೆ ಅಜಿತ್ ದೋವಲ್ ಅವರ ಪುತ್ರ ಶೌರ್ಯ ದೋವಲ್ ಪಾಕಿಸ್ತಾನದ ಉದ್ಯಮಿ ಸೈಯದ್ ಅಲಿ ಅಬ್ಬಾಸ್ ಹಾಗೂ ಮತ್ತೊಬ್ಬ ಉದ್ಯಮಿ ಸೌದಿ ಅರೇಬಿಯಾದವರು ಇದಕ್ಕೆ ಅಮಿತ್ ಶಾ ಯಾಕೆ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics