ಭ್ರಷ್ಟಾಚಾರ ವೇಳೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದ ತಮಿಳುನಾಡು ಅರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು!
ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದ ತಮಿಳುನಾಡು ಅರೋಗ್ಯಾಧಿಕಾರಿಯೊಬ್ಬರು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಚೆನ್ನೈ: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದ ತಮಿಳುನಾಡು ಅರೋಗ್ಯಾಧಿಕಾರಿಯೊಬ್ಬರು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ಹಿರಿಯ ಆರೋಗ್ಯಧಿಕಾರಿ ಕೆ ಶ್ರೀಧರ್ ಎನ್ನುವವರ ಶವ ಚೆನ್ನೈ ಹೊರವಲಯದ ಪೊಣ್ಣೇರಿಯ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶ್ರೀಧರ್ ತಮಿಳುನಾಡಿನ ಎಗ್ಮೋರ್ ನ ಸರ್ಕಾರಿ ಕಣ್ಣಿನ ಆಸ್ಪತ್ರೆಯ ನಿರ್ದೇಶಕ ಮತ್ತು ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಸೆಪ್ಟೆಂಬರ್ ನಲ್ಲಿ ನೇತ್ರ ಹೀನ ವಿಕಲಾಂಗ ಚೇತನ ವ್ಯಕ್ತಿಯೊಬ್ಬರಿಗೆ ಅಂಕವಿಕಲ ಪ್ರಮಾಣ ಪತ್ರ ನೀಡಲು 500 ರು.ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ಚೆನ್ನೈ ಮೂಲದ ನಾಗರಿಕ ಹಕ್ಕುಗಳ ಸಂಸ್ಥೆ ಅರಾಪೋರ್ ಇಯಕ್ಕಮ್ ಇದರ ಕುಟುಕು ಕಾರ್ಯಾಚರಣೆ ನಡೆಸಿ ಈ ವಿಡಿಯೋವನ್ನು ಚಿತ್ರೀಕರಿಸಿರುವುದಾಗಿ ಹೇಳಿಕೊಂಡಿತ್ತು. ವಿಡಿಯೋದಲ್ಲಿ ಇರುವಂತೆ ದೃಷ್ಟಿ ಹೀನ ವ್ಯಕ್ತಿ ತನ್ನ ಬಳಿ 500 ರು.. ಇಲ್ಲ ಎಂದಾಗ ನಿನ್ನ ಸ್ನೇಹಿತ ಬಳಿ ಹೋಗಿ ತೆಗೆದುಕೊಂಡು ಬಾ ಇಲ್ಲವವೇ ಬ್ಯಾಂಕ್ ಖಾತೆಗೆ ಟ್ರಾನ್ಸ್ ಫರ್ ಮಾಡಿಸು ಎಂದು ಹೇಳಿದ್ದರಂತೆ. ಈ ಪ್ರಕರಣ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ತಮಿಳುನಾಡು ಆರೋಗ್ಯ ಸಚಿವರಾದ ಜೆ ರಾಧಾಕೃಷ್ಣ ಅವರು, ಪ್ರಕರಣದ ತನಿಖೆಗೆ ಆದೇಶಿಸಿದ್ದರು. ಅಲ್ಲದೆ ಆರೋಪಿ ವೈದ್ಯಾಧಿಕಾರಿಗಳು ವಿರುದ್ಧ ಪ್ರಕರಣ ಕೂಡ ದಾಖಲಿಸಿಕೊಳ್ಳಲಾಗಿತ್ತು.
ಅಂತೆಯೇ ಸಂಸ್ಥೆಯ ಆಂತರಿಕ ತನಿಖೆ ನಡೆಸಿದ್ದ ಅಧಿಕಾರಿಗಳು ವೈದ್ಯಾಧಿಕಾರಿ ಶ್ರೀಧರ್ ಅವರ ಅಮಾತಿಗೆ ಶಿಫಾರಸ್ಸು ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.