ಲೋಕಸಭೆ ಕಲಾಪ 
ದೇಶ

ಚಳಿಗಾಲದ ಸಂಸತ್ ಅಧಿವೇಶನ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಶುಕ್ರವಾರದಿಂದ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ನವದೆಹಲಿ: ಶುಕ್ರವಾರದಿಂದ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.
ಇಂದು ಆರಂಭವಾದ ಲೋಕಸಭೆ ಕಲಾಪದಲ್ಲಿ ನಮ್ಮನ್ನಗಲಿದ ಸಂಸದರಿಗೆ ಸಂತಾಪ ಸೂಚಿಸಿದ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು. ಸ್ಪೀಕರ್ ಸುಮಿತ್ರಾ ಮಹಾಜನ್  ಅವರು ಇಬ್ಬರು ಹಾಲಿ ಸಂಸದರ ನಿಧನ ಹಾಗೂ ಐದು ಮಂದಿ ಮಾಜಿ ಸಂಸದರ ನಿಧನದ ಹಿನ್ನಲೆಯಲ್ಲಿ ಸಂತಾಪ ಸೂಚಿಸಿದರು.
ಬಿಜೆಪಿ ಪಕ್ಷದ ಆಳ್ವಾರ್ ಲೋಕಸಭಾ ಕ್ಷೇತ್ರದ ಸಂಸದರಾದ ಮಹಾಂತ್ ಚಾಂದ್ ನಾಥ್ ಅವರು, ಕ್ಯಾನ್ಸರ್ ನಿಂದ ಬಳಲಿ ಕಳೆದ ಸೆಪ್ಟೆಂಬರ್ ನಲ್ಲಿ ಸಾವನ್ನಪ್ಪಿದ್ದರು. ಅಂತೆಯೇ ಆರ್ ಜೆಡಿ ಪಕ್ಷದ ಹಿರಿಯ ನಾಯಕರಾಗಿದ್ದ  ತಸ್ಲೀಮುದ್ದೀನ್ ಅವರು ಅರಾರಿಯಾ ಕ್ಷೇತ್ರದ ಸಂಸದರಾಗಿದ್ದು ಅವರು ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಸಿ ಸಾವನ್ನಪ್ಪಿದ್ದರು. ಇನ್ನುಳಿದಂತೆ ಇತ್ತೀಚೆಗೆ ಸಾವನ್ನಪ್ಪಿದ್ದ ಮಾಜಿ ಸಂಸದರಾದ ಸುಲ್ತಾನ್ ಅಹ್ಮದ್, ವಿಕ್ರಮ್  ಮಹಾಜನ್, ರಾಮ್ ಸಿಂಗ್, ಆರ್ ಕೀಶಿಂಗ್, ಪಿಸಿ ಬರ್ಮನ್, ಧನರಾಜ್ ಸಿಂಗ್, ಅಮಲ್ ದತ್ತಾ ಮತ್ತು ಪ್ರಿಯರಂಜನ್ ದಾಶ್ ಮುಂನ್ಷಿ ಅವರಿಗೆ ಸಂತಾಪ ಸೂಚಿಸಲಾಗಿತ್ತು.
ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಮರು ಆರಂಭವಾಗಲಿದೆ. ಅಧಿವೇಶನ 14 ದಿನ ನಡೆಯಲಿದ್ದು, ಪ್ರಧಾನಿ ಮೋದಿ ಸಂಸತ್ತನ್ನು ಉದ್ದೇಶಿಸಿ ಮಾತನಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಿದರು. ನಿಗದಿಗಿಂತ ಒಂದು ತಿಂಗಳು ವಿಳಂಬವಾಗಿ ಆರಂಭವಾಗಿರುವ ಅಧಿವೇಶನ ಜನವರಿ 5, 2018ಕ್ಕೆ ಮುಗಿಯಲಿದೆ. ಅಧಿವೇಶನದಲ್ಲಿ ತ್ರಿವಳಿ ತಲಾಖ್, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ. ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಜಿಎಸ್ಟಿ, ನೋಟ್ ಬ್ಯಾನ್, ಬ್ಯಾಂಕಿಂಗ್ ವ್ಯವಸ್ಥೆ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ