ದೇಶ

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕಾರ

Srinivasamurthy VN
ನವದೆಹಲಿ: ನಿರೀಕ್ಷೆಯಂತೆಯೇ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕೃತವಾಗಿ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.
ದೆಹಲಿಯ ಅಕ್ಬರ್ ರೋಡ್‌ನಲ್ಲಿರುವ ಕಾಂಗ್ರೆಸ್ ಮುಖ್ಯ ಕಚೇರಿಯ ಹೊರಭಾಗದಲ್ಲಿ ನಿರ್ಮಾಣ ಮಾಡಲಾಗಿರುವ ವಿಶೇಷ ವೇದಿಕೆಯಲ್ಲಿ ನಿರ್ಗಮಿತ ಅಧ್ಯಕ್ಷೆ ರಾಹುಲ್ ಅವರ ತಾಯಿ ಸೋನಿಯಾಗಾಂಧಿ ಅವರು, ರಾಹುಲ್ ಗಾಂಧಿಗೆ  ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲುಮುಟ್ಟಿತ್ತು. 
ಇದಕ್ಕೂ ಮೊದಲು ಕೇಂದ್ರ ಚುನಾವಣೆ ಪ್ರಾಧಿಕಾರದ ಅಧ್ಯಕ್ಷ ಎಂ. ರಾಮಚಂದ್ರನ್ ಅವರಿಂದ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಆ ಮೂಲಕ ರಾಹುಲ್ ಗಾಂಧಿ ಎಐಸಿಸಿ ಸಾರಥ್ಯ ವಹಿಸಿಕೊಂಡ 6ನೇ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ಗಾಂಧಿ ಕುಟುಂಬದಿಂದ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರು ಎಐಸಿಸಿ ಅಧ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು, ಸಂಸದರು, ಹಿರಿಯ ಕಾಂಗ್ರೆಸ್ ನಾಯಕರು ಹಾಗೂ  ಎಲ್ಲ ಪಿಸಿಸಿ ಮುಖ್ಯಸ್ಥರು ಉಪಸ್ಥಿತರಿದ್ದರು.
SCROLL FOR NEXT