ದೇಶ

ರಾಯ್‌ ಬರೇಲಿಯಿಂದ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಪ್ರಿಯಾಂಕಾ ಗಾಂಧಿ

Lingaraj Badiger
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಶನಿವಾರ ನಿವೃತ್ತಿ ಪಡೆದ ಸೋನಿಯಾ ಗಾಂಧಿ ಅವರೇ ಮತ್ತೆ ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಹೀಗಾಗಿ ತಾವು ರಾಯ್ ಬರೇಲಿಯಿಂದ ಸ್ಪರ್ಧಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ.
ಇಂದು ತಮ್ಮ ಸಹೋದರ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ನನ್ನ ತಾಯಿ ಸೋನಿಯಾ ಗಾಂಧಿಯಷ್ಟು ದೃಢಮನಸ್ಸಿನ ಮಹಿಳೆಯನ್ನು ನಾನು ಕಂಡಿಲ್ಲ. ಅವರೇ ಮುಂದಿನ ಚುನಾವಣೆಯಲ್ಲಿ ರಾಯ್‌ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷೆ ಸ್ಥಾನದಿಂದ ಮಾತ್ರ ನಿವೃತ್ತಿಯಾಗುತ್ತಿದ್ದಾರೆ. ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಪಕ್ಷ ಮುನ್ನಡೆಸಲು ರಾಹುಲ್ ಗಾಂಧಿ ಅವರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದರು.
2014ರ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎರಡು ಲೋಕಸಭಾ ಸ್ಥಾನಗಳನ್ನು ಮಾತ್ರ ಕಾಂಗ್ರೆಸ್ ಉಳಿಸಿಕೊಂಡಿದೆ. ಅದರಲ್ಲಿ ಒಂದು ಸೋನಿಯಾ ಗಾಂಧಿ ಅವರು ಪ್ರತಿನಿಧಿಸುವ ರಾಯ್‌ ಬರೇಲಿ, ಮತ್ತೊಂದು ರಾಹುಲ್‌ ಗಾಂಧಿ ಸಂಸದರಾಗಿ ಆಯ್ಕೆಯಾಗಿರುವ ಅಮೇಥಿ.
SCROLL FOR NEXT