ಮುಂಬೈ: ಕೇಂದ್ರ ಹಾಗೂ ಗುಜರಾತ್ ನಲ್ಲಿ ಬಿಜೆಪಿ ಆಡಳಿತ ಟೀಕಿಸಿದ ಮತ್ತು ವಿಶ್ವಾಸ ಹುಟ್ಟಿಸಿದ ನೂತನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಹಾಡಿ ಹೊಗಳಿದ್ದಾರೆ.
ರಾಹುಲ್ ಗಾಂಧಿ ಅವರು ಗುಜರಾತ್ ನಲ್ಲಿ ಕಠಿಣ ಶ್ರಮ ಹಾಕಿದ್ದಾರೆ. ಈ ಮೂಲಕ ಅವರು ಜನರಲ್ಲಿ ವಿಶ್ವಾಸ ಮೂಡಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ಪಕ್ಷದ ಕಾರ್ಯಕರ್ತರ ವಿಶ್ವಾಸ ಗಳಿಸಲಿದ್ದಾರೆ ಎಂದು ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.
ಇದೇ ವೇಳೆ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಿವಸೇನೆ ಮುಖ್ಯಸ್ಥ, ಲೋಡ್ ಶೆಡ್ಡಿಂಗ್, ರೈತರ ಸಾಲ ಮನ್ನಾ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದಿದ್ದಾರೆ.
ಗುಜರಾತ್ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಸ್ತಾಪಿಸಿದ ಉದ್ಧ ಠಾಕ್ರೆ, ಅವರಿಗೆ ತಳಮಟ್ಟದ ಸತ್ಯ ಗೊತ್ತಿಲ್ಲ. ಚುನಾವಣಾ ಫಲಿತಾಂಶ ಪ್ರಕಟಗೊಂಡಾಗ ತಳಮಟ್ಟದ ಸತ್ಯ ಏನು ಎಂಬುದು ತಿಳಿಯಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics