ದೇಶ

ಲವ್ ಜಿಹಾದ್ ಪ್ರಕರಣ: ಉದಯ್ ಪುರದಲ್ಲಿ ಮೊಬೈಲ್ ಇಂಟರ್ ನೆಟ್ ನಿಷೇಧ, ನಿಷೇಧಾಜ್ಞೆ ತೆರವು

Lingaraj Badiger
ಉದಯ್ ಪುರ: ಲವ್ ಜಿಹಾದ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜಸ್ತಾನದ ಉದಯ್ ಪುರದಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಮತ್ತು ಮೊಬೈಲ್ ಇಂಟರ್ ನೆಟ್ ನಿಷೇಧವನ್ನು ಭಾನುವಾರ ತೆರವುಗೊಳಿಸಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಮೊಬೈಲ್ ಇಂಟರ್ ನೆಟ್ ನಿಷೇಧ ಮತ್ತು ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಲೆ ಪ್ರಕರಣಕ್ಕೆ ‘ಲವ್‌ ಜಿಹಾದ್‌’ ಕಾರಣ ಎನ್ನಲಾಗಿರುವುದರಿಂದ ಜಿಲ್ಲೆಯಲ್ಲಿ ಕೋಮುಗಲಭೆಯ ಆಂತಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕಳೆದ ಬುಧವಾರ 144 ಸೆಕ್ಷನ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದರು. ಅಲ್ಲದೆ ವಿಡಿಯೊ ಹಂಚಿಕೆಯಾಗುವುದನ್ನು ತಪ್ಪಿಸಲು ಉದಯ್‌ಪುರ ಜಿಲ್ಲೆ ವ್ಯಾಪ್ತಿಯಲ್ಲಿ ಅಂತರ್ಜಾಲ ಸೇವೆಯನ್ನು ನಿರ್ಬಂಧಿಸಲಾಗಿತ್ತು.
ಲವ್ ಜಿಹಾದ್' ಆರೋಪದ ಮೇಲೆ ಶಂಭುನಾಥ್ ರಾಯ್‌ಘರ್‌ ಎಂಬಾತ ಮುಸ್ಲಿಂ ಕಾರ್ಮಿಕ ಮೊಹಮ್ಮದ್ ಅಫ್ರಾಜುಲ್ ಎಂಬುವವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಜೀವಂತವಾಗಿ ಸುಟ್ಟು ಹಾಕಿದ್ದರು. ಸಜೀವವಾಗಿ ದಹಿಸಿದ್ದ ವೀಡಿಯೋ ಇಡೀ ದೇಶವನ್ನು ಬೆಚ್ಚಿ ಬಿಳಿಸಿತ್ತು. ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿತ್ತು. ಈ ಸಾಕ್ಷ್ಯದ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪೈಶಾಚಿಕ ಕೃತ್ಯ ಖಂಡಿಸಿ ಪ್ರತಿಭಟನೆಗಳು ನಡೆದಿದ್ದವು.
SCROLL FOR NEXT