ನರೇಂದ್ರ ಮೋದಿ 
ದೇಶ

2018 ರ ವಿಧಾನಸಭಾ ಚುನಾವಣೆಗಳಿಗೆ ಪ್ರಧಾನಿ ತಯಾರಿ: ಮೇಘಾಲಯ, ಮಿಜೋರಾಮ್ ನಲ್ಲಿ ಪ್ರಚಾರಕ್ಕೆ ಚಾಲನೆ!

ಪ್ರಧಾನಿ ನರೇಂದ್ರ ಮೋದಿ 2018 ರಲ್ಲಿ ಚುನಾವಣೆ ನಡೆಯಲಿರುವ ಮೇಘಾಲಯ, ಮಿಜೋರಾಮ್ ನ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಶಿಲ್ಲಾಂಗ್: ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ಎರಡೂ ರಾಜ್ಯಗಳಲ್ಲಿ ಯಶಸ್ವಿ ಪ್ರಚಾರ ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ 2018 ರಲ್ಲಿ ಚುನಾವಣೆ ನಡೆಯಲಿರುವ ಮೇಘಾಲಯ, ಮಿಜೋರಾಮ್ ನ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. 
ಡಿ.16 ರಂದು ಎರಡು ಸಾರ್ವಜನಿಕ ರ್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಮೇಘಾಲಯದಲ್ಲಿ ಶಿಲ್ಲಾಂಗ್-ನಾಂಗ್ಸ್ಟೊಯಿನ್-ರೊಂಗ್ಜೆಂಗ್-ತುರಾ ರಸ್ತೆಯ ಉದ್ಘಾಟನೆ ಕಾರ್ಯಕ್ರಮಕ್ಕೆ ಹಾಗೂ ಮಿಜೋರಾಮ್ ನಲ್ಲಿ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. 
ಮಿಜೋರಾಮ್ ಹಾಗೂ ಮೇಘಾಲಯ ವಿಧಾನಸಭಾ ಚುನಾವಣೆ 2018 ರಲ್ಲಿ ನಡೆಯಲಿದೆ. ಈಶಾನ್ಯ ರಾಜ್ಯಗಳ ಪೈಕಿ ಬಿಜೆಪಿ ಈಗಾಗಲೇ ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶದಲ್ಲಿ ಆಡಳಿತದಲ್ಲಿದ್ದು, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!