ಗುಜರಾತ್ ನಲ್ಲಿ ಮರು ಮತ ಎಣಿಕೆಗೆ ಹಾರ್ದಿಕ್ ಪಟೇಲ್ ಆಗ್ರಹ
ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಹಾರ್ದಿಕ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಇವಿಎಂ ನ ಸಹಾಯದಿಂದ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ.
ಅಹಮಬಾದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಹಾರ್ದಿಕ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಇವಿಎಂ ನ ಸಹಾಯದಿಂದ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಹಾರ್ದಿಕ್ ಪಟೇಲ್ ಬಿಜೆಪಿ ಸೂರತ್ ರಾಜ್ ಕೋಟ್ ಅಹಮದಾಬಾದ್ ನಲ್ಲಿ ದುರ್ಬಳಕೆ ಮಾಡಿ ಬಿಜೆಪಿ ಗೆದ್ದಿದೆ ಎಂದು ಆರೋಪಿಸಿರುವ ಹಾರ್ದಿಕ್ ಪಟೇಲ್ ಮರು ಮತ ಎಣಿಕೆ ನಡೆಸುವಂತೆ ಆಗ್ರಹಿಸಿದ್ದಾರೆ.
ಇವಿಎಂ ಹ್ಯಾಕ್, ಬಿಜೆಪಿ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹಾರ್ದಿಕ್ ಪಟೇಲ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.