ಅಹಮದಾಬಾದ್: ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಮವಾರ ಗುಜರಾತ್ ನಲ್ಲಿ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಪ್ರಸ್ತುತ ಮತಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದೆ. ಬೆಳಗ್ಗೆ 10 ಗಂಟೆ ವೇಳೆಗೆ ಗುಜರಾತ್ ನಲ್ಲಿ ಬಿದೆಪಿ ಪಕ್ಷ ಒಟ್ಟು 182 ಕ್ಷೇತ್ರಗಳಲ್ಲಿ ಪೈಕಿ ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಆಯೋಗ ನೀಡಿರುವ ಮಾಹಿತಿಯಂತೆ ಬೆಳಗ್ಗೆ 10 ಗಂಟೆ ವೇಳೆಗೆ ಬಿಜೆಪಿ ಪಕ್ಷ ಒಟ್ಟು 94 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 64 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ ಎಂದು ಹೇಳಿದೆ.
ಇನ್ನು ಇತ್ತೀಚಿನ ವರದಿಗಳು ಬಂದಾಗ ಗುಜರಾತ್ ನಲ್ಲಿ ಆಡಳಿತಾ ರೂಢ ಬಿಜೆಪಿ ಪಕ್ಷ ಸ್ಪಷ್ಟ ಸರಳ ಬಹುಮತದತ್ತ ಮುನ್ನಡೆದಿದ್ದು, ಈ ವರೆಗಿನ ಫಲಿತಾಂಶದಲ್ಲಿ ಒಟ್ಟು 107 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಹಿಂದೆ ಬಿಜೆಪಿ ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್ 74 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.