ನವದೆಹಲಿ: ಬಹು ನಿರೀಕ್ಷಿತ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಅಂಚೆಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಗುಜರಾತ್ ನಲ್ಲಿ ಆಡಳಿತಾರೂಢ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.
ಗುಜರಾತ್ ವಿಧಾನಸಭೆ ಒಟ್ಟು 182 ಸ್ಥಾನಗಳನ್ನು ಹೊಂದಿದ್ದು, ಸರ್ಕಾರ ರಚನೆಗಾಗಿ 92 ಸ್ಥಾನಗಳ ಅಗತ್ಯವಿದೆ. ಅಂತೆಯೇ ಹಿಮಾಚಲ ಪ್ರದೇಶ ವಿಧಾನಸಭೆ ಒಟ್ಟು 68 ಸ್ಥಾನಗಳನ್ನು ಹೊಂದಿದ್ದು, ಅಧಿಕಾರ ರಚನೆಗೆ ಇಲ್ಲಿ 35 ಸ್ಥಾನಗಳ ಅಗತ್ಯವಿದೆ. ಇನ್ನು ಈ ಹಿಂದೆ ನಡೆದ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ಅಭಿಪ್ರಾಯಪಟ್ಟಿದೆ.
ಎರಡೂ ರಾಜ್ಯಗಳಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ
ಇನ್ನು ಪ್ರಸ್ತುತ ಆರಂಭವಾಗಿರುವ ಮತಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಪಶ್ರ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಗುಜರಾತ್ ಒಟ್ಟು 182 ಕ್ಷೇತಕ್ರಗಳ ಪೈಕಿ ಬಿಜೆಪಿ ಒಟ್ಟು 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಕಾಂಗ್ರೆಸ್ ಪಕ್ಷ 11 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಅಂತೆಯೇ ಹಿಮಾಚಲ ಪ್ರದೇಶದಲ್ಲೂ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದ್ದು, 68 ಕ್ಷೇತ್ರಗಳಲ್ಲಿ ಪೈಕಿ ಪ್ರಸ್ತುತ ಬಿಜೆಪಿ 8 ಮತ್ತು ಕಾಂಗ್ರೆಸ್ ಪಕ್ಷ 3 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿವೆ.