ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ರಾಹುಲ್ ಗಾಂಧಿಗೆ ಅಭಿನಂದನೆ! 
ದೇಶ

ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ರಾಹುಲ್ ಗಾಂಧಿಗೆ ಅಭಿನಂದನೆ!

ಕಾಂಗ್ರೆಸ್ ನ ಕಾರ್ಯಕರ್ತರು ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಆದರೆ ಕಾಂಗ್ರೆಸ್ ನ ಕಾರ್ಯಕರ್ತರು ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. 
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂಬ ವಿಶ್ವಾಸದಲ್ಲಿ ಕಾರ್ಯಕರ್ತರಿದ್ದು, ಫಲಿತಾಂಶಕ್ಕೂ ಮುನ್ನವೇ ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಬ್ಯಾನರ್ ಹಿಡಿದು ಕಾಂಗ್ರೆಸ್ ನ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ರಾಹುಲ್ ಗಾಂಧಿ ಅವರ ನಿವಾಸದ ಎದುರು ಜಮಾಯಿಸಿರುವ ಸಾವಿರಾರು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಕೆಲವರು ಪೂಜೆ ಮಾಡುತ್ತಿರುವುದೂ ಕಂಡುಬಂದಿದೆ. 
ಇತ್ತೀಚಿನ ವರದಿಯ ಪ್ರಕಾರ ಹಿಮಾಚಲದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೆ ಗುಜರಾತ್ ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi Building Collapse: ಸಾವಿನ ಸಂಖ್ಯೆ 3ಕ್ಕೆ ಏರಿಕೆ; 9 ಮಂದಿ ರಕ್ಷಣೆ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!

43ನೇ ವಯಸ್ಸಿನಲ್ಲಿ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕೋಟ್ಯಾಧಿಪತಿ ಇಘೋ ಉಬಿರಿಬೊ ಸಾವು!

Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!