ನವದೆಹಲಿ: ಗುಜರಾತ್ ಚುನಾವಣಾ ಫಲಿತಾಂಶ ತಮಗೆ ನಿರಾಸೆ ತಂದಿಲ್ಲ. ಬದಲಿಗೆ ಫಲಿತಾಂಶ ತೃಪ್ತಿ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಅತ್ತ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಹಲ್ ಗಾಂಧಿ ಅವರು, ಫಲಿತಾಂಶ ತೃಪ್ತಿ ತಂದಿದೆ. ನಿರಾಶೆ ಮೂಡಿಸಿಲ್ಲ ಎಂದು ಹೇಳಿದ್ದಾರೆ.
ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಚುನಾವಣಾ ಫಲಿತಾಂಶ ಇದಾಗಿದ್ದು, ಚುನಾವಣೆ ನಡೆಯುವ ಹೊತ್ತಿಗೆ ಅವರು ಎಐಸಿಸಿ ಉಪಾಧ್ಯಕ್ಷರಾಗಿದ್ದರು. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಗುಜರಾತ್ ನಲ್ಲಿ ಬಹುಮತ ಗಳಿಸದಿದ್ದರೂ, ಹಿಂದಿನ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದೆ.
ಇತ್ತೀಚಿನ ವರದಿಗಳ ಬಂದಾಗ ಗುಜರಾತ್ ನಲ್ಲಿ ಬಿಜೆಪಿ ಪಕ್ಷ ಒಟ್ಟು 92 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಇನ್ನೂ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂತೆಯೇ ಕಾಂಗ್ರೆಸ್ ಪಕ್ಷ 74 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.