ಯಾದಗಿರಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೇರುತ್ತಿದೆಯಾದರೂ, ಕಳೆದ ಬಾರಿಗಿಂತ ಕನಿಷ್ಟ 13 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದ್ದು, ಕಾಂಗ್ರೆಸ್ ಉತ್ತಮ ಪೈಪೋಟಿ ನೀಡಿದೆ.
ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಹಲವು ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗುಜರಾತ್ ನಲ್ಲಿ ನಾವು ಸೋತು ಗೆದ್ದಿದ್ದೀವಿ. ರಾಹುಲ್ ಗಾಂಧಿಯವರನ್ನು ಯುವನಾಯಕ ಎಂದು ಜನತೆ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮೋದಿ ಸರ್ಕಾರದ ನೀತಿಗಳನ್ನು ಜನತೆ ಒಪ್ಪಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.