ಜಮ್ಮು: ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ, ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಕಾಂಗ್ರೆಸ್ ತಪ್ಪು ಹೇಳಿಕೆಗಳನ್ನು ನೀಡದೇ ಇದ್ದಿದ್ದರೆ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನು ಯಾವುದೇ ವ್ಯಕ್ತಿಯ ಹೆಸರನ್ನು ಹೇಳುವುದಕ್ಕೆ ಇಷ್ಟಪಡುವುದಿಲ್ಲ, ಆದರೆ ಕಲವರು ಒಂದಷ್ಟು ತಪ್ಪು ಪದಗಳನ್ನು ಬಳಸಿ ಹೇಳಿಕೆ ನೀಡದೇ ಇದ್ದಿದ್ದರೆ ಕಾಂಗ್ರೆಸ್ ಗುಜರಾತ್ ನಲ್ಲಿ -ಗೆಲ್ಲಲು ಸಾಧ್ಯವಾಗುತ್ತಿತ್ತು, ಆದರೂ ಕಾಂಗ್ರೆಸ್ ಗುಜರಾತ್ ನಲ್ಲಿ ಉತ್ತಮ ಪ್ರದರ್ಶನ ನೀಡಿದೆ ಎಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಇದೇ ವೇಳೆ ಹಿಮಾಚಲ ಪ್ರದೇಶ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ್ದು ಒಂದೇ ಪಕ್ಷ ಹಿಮಾಚಲ ಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಉದಾಹರಣೆ ಕಡಿಮೆ, ಹಾಗೆಯೇ ಈ ಬಾರಿಯೂ ಆಡಳಿತದಲ್ಲಿದ್ದ ಪಕ್ಷವನ್ನು ಬಿಟ್ಟು ಬೇರೊಂದು ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ ಇದು ಹಿಮಾಚಲ ಪ್ರದೇಶದಲ್ಲಿ ಸಹಜವಾದದ್ದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics