ದೇಶ

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ರಾಜಿನಾಮೆ

Lingaraj Badiger
ಶಿಮ್ಲಾ: ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ವೀರಭದ್ರ ಸಿಂಗ್ ಅವರು ಇಂದು ಮಧ್ಯಾಹ್ನ ರಾಜ್ಯಪಾಲ ಆಚಾರ್ಯಾ ದೇವ್ರಾತ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದ್ದು, ಅವರ ರಾಜಿನಾಮೆಯನ್ನು ದೇವ್ರಾತ್ ಅವರು ಅಂಗೀಕರಿಸಿದ್ದಾರೆ. ಅಲ್ಲದೆ ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸೂಚಿಸಿದ್ದಾರೆ.
ತೀವ್ರ ಆಡಳಿತ ವಿರೋಧಿ ಅಲೆ ಎದುರಿಸಿದ್ದ ಕಾಂಗ್ರೆಸ್ ಕೇವಲ 21 ಸ್ಥಾನಗಳನ್ನು ಮಾತ್ರ ಪಡೆದಿದ್ದು, ಪ್ರತಿಪಕ್ಷ ಬಿಜೆಪಿ 68 ಕ್ಷೇತ್ರಗಳ ಪೈಕಿ 44 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಸಿಪಿಐ ಒಂದು ಕ್ಷೇತ್ರದಲ್ಲಿ ಹಾಗೂ ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ರಾಂಪುರ್-ಬಶಾಹರ್ ರಾಯಲ್ ಕುಟುಂಬದ 83 ವರ್ಷದ ವೀರಭದ್ರ ಸಿಂಗ್ ಅವರು ಅರ್ಕಿ ವಿಧಾನಸಭಾ ಕ್ಷೇತ್ರದಿಂದ ಎಂಟನೇ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 
SCROLL FOR NEXT