ಜಿಗ್ನೇಶ್ ಮೆವಾನಿ 
ದೇಶ

ಶಾಸಕನಾಗಿ ಪ್ರಮಾಣ ಸ್ವೀಕರಿಸುವ ಮುನ್ನವೇ ಕೆಲಸ ಆರಂಭಿಸಿದ ಜಿಗ್ನೇಶ್ ಮೆವಾನಿ

ಗುಜರಾತ್ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ದಲಿತ ನಾಯಕ, ಪಕ್ಷೇತರ ಅಭ್ಯರ್ಥಿ ಜಿಗ್ನೇಶ್ ಮೆವಾನಿ ಅವರು ಶಾಸಕರಾಗಿ....

ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ದಲಿತ ನಾಯಕ, ಪಕ್ಷೇತರ ಅಭ್ಯರ್ಥಿ ಜಿಗ್ನೇಶ್ ಮೆವಾನಿ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಮಂಗಳವಾರ ತಮ್ಮ ಕೆಲಸ ಆರಂಭಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾದ ಮರುದಿನವೇ ಪಲನ್ ಪುರ್ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಜಿಗ್ನೇಶ್ ಮೆವಾನಿ, ಮುಂದಿನ 15 ದಿನಗಳಲ್ಲಿ ರಸ್ತೆಗಳನ್ನು ಸರಿಪಡಿಸದಿದ್ದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಡ್ಗಾಮ್ ನಲ್ಲಿ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ 19,696 ಮತಗಳ ಅಂತರದಿಂದ ಗೆಲುವು ಸಾಧಿಸಿದ ಮೆವಾನಿ ಇಂದು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ರಸ್ತೆ ದುರಸ್ತಿ ಬಗ್ಗೆ ಮನವಿ ಸಲ್ಲಿಸಿದ್ದಾರೆ.
ನಾನು ವಡ್ಗಾಮ್ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಎದುರಿಸಿದ ಸಮಸ್ಯೆಗಳನ್ನು ಈ ಕೂಡಲೇ ಪರಿಹರಿಸುವಂತೆ ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಹಾಗೂ ಶಾಸಕನಾಗಿ ಒತ್ತಾಯಿಸಿದ್ದೇನೆ ಎಂದು ಮೆವಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT