ಸಂತ್ರಸ್ತರೊಂದಿಗೆ ನರೇಂದ್ರ ಮೋದಿ 
ದೇಶ

ಲಕ್ಷದ್ವೀಪದಲ್ಲಿ ಒಖಿ ಸಂತ್ರಸ್ತರ ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಒಖಿ ಚಂಡಮಾರುತದಿಂದ ಹಾನಿಗೊಳಗಾದ ಲಕ್ಷದ್ವೀಪದ...

ಲಕ್ಷದ್ವೀಪ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಒಖಿ ಚಂಡಮಾರುತದಿಂದ ಹಾನಿಗೊಳಗಾದ ಲಕ್ಷದ್ವೀಪದ ಕವರಟ್ಟಿಗೆ ಭೇಟಿ  ನೀಡಿ, ಸಂತ್ರಸ್ತ ಕುಟುಂಬಗಳಿಗೆ ವಿಶ್ವಾಸ ತುಂಬಿದರು.
ನಿನ್ನೆ ರಾತ್ರಿ ಮಂಗಳೂರಿನಲ್ಲಿ ತಂಗಿದ್ದ ಪ್ರಧಾನಿ ಮೋದಿ, ಇಂದು ಬೆಳಗ್ಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದರು. ಲಕ್ಷದ್ವೀಪದಲ್ಲಿ ಪ್ರಧಾನಿ ಅವರನ್ನು ಶಾಲೆ, ಕಾಲೇಜು ವಿದ್ಯಾರ್ಥಿಗಳು ಸ್ವಾಗತಿಸಿದರು. ಸ್ವಾಗತ ಕೋರಿದ ಮಕ್ಕಳ ಜತೆ ಮೋದಿ ಕೆಲ ಕಾಲ ಮಾತನಾಡಿದರು.
ಬಳಿಕ, ಪ್ರಧಾನಿ ಚಂಡಮಾರುತದಿಂದ ಆಗಿರುವ ಹಾನಿಯ ಕುರಿತು ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿ, ಮಾಹಿತಿ ಪಡೆದರು. ನಂತರ ಚಂಡಮಾರುತದಿಂದ ನಿರಾಶ್ರಿತರಾದ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. 
ಲಕ್ಷದ್ವೀಪದಿಂದ ಈಗ ಕೇರಳಕ್ಕೆ ಪ್ರಧಾನಿ ಮೋದಿ ತೆರಳಿದ್ದು, ಅವರನ್ನು ತಿರುವನಂತಪುರದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಾಗತಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

SCROLL FOR NEXT