ಕೋಲ್ಕತ್ತಾ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕರ್ಣನ್ ಜೈಲಿನಿಂದ ಬಿಡುಗಡೆ
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 6 ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೋಲ್ಕತ್ತಾ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕರ್ಣನ್ ಜೈಲಿನಿಂದ ಡಿ.20 ರಂದು ಬಿಡುಗಡೆಯಾಗಿದ್ದಾರೆ.
ಕೋಲ್ಕತ್ತಾ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 6 ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೋಲ್ಕತ್ತಾ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕರ್ಣನ್ ಜೈಲಿನಿಂದ ಡಿ.20 ರಂದು ಬಿಡುಗಡೆಯಾಗಿದ್ದಾರೆ.
6 ತಿಂಗಳ ಶಿಕ್ಷೆ ಅವಧಿ ಪೂರ್ಣಗೊಳಿಸಿದ ನಂತರ ಕರ್ಣನ್ ಬಿಡುಗಡೆಯಾಗಿದ್ದು, ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ 6 ತಿಂಗಳ ಶಿಕ್ಷೆಗೊಳಗಾಗಿದ್ದರು. ಶಿಕ್ಷೆ ಪ್ರಕಟವಾಗುದ ಸಂದರ್ಭದಲ್ಲಿ ತಲೆಮರೆಸಿಕೊಂಡಿದ್ದ ನ್ಯಾ.ಕರ್ಣನ್ ಅವರನ್ನು ಒಂದು ತಿಂಗಳ ಕಾರ್ಯಾಚರಣೆ ನಂತರ ಅಂದರೆ ಜೂ.20 ರಂದು ಪೊಲೀಸರು ಬಂಧಿಸಿದ್ದರು.
ಹೈಕೋರ್ಟ್ ನ ಹಾಲಿ ನ್ಯಾಯಾಧೀಶರೊಬ್ಬರಿಗೆ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆ ವಿಧಿಸಿದ್ದ ವಿಲಕ್ಷಣ ಘಟನೆಗೆ ಕರ್ಣನ್ ಪ್ರಕರಣ ಸಾಕ್ಷಿಯಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.