ಸಾಂದರ್ಭಿಕ ಚಿತ್ರ 
ದೇಶ

10 ಕೋಟಿ ಅಧಿಕ ಫ್ಲೋರೈಡ್ ಯುಕ್ತ ವಿಷಕಾರಿ ನೀರು ಸೇವನೆ: ಕೇಂದ್ರ ಸರ್ಕಾರ

ಅಧಿಕ ಫ್ಲೋರೈಡ್ ಯುಕ್ತ ಕಲುಷಿತ ನೀರನ್ನು ದೇಶದಲ್ಲಿ 10 ಕೋಟಿಗೂ ಅಧಿಕ ...

ನವದೆಹಲಿ: ಅಧಿಕ ಫ್ಲೋರೈಡ್ ಯುಕ್ತ ಕಲುಷಿತ ನೀರನ್ನು ದೇಶದಲ್ಲಿ 10 ಕೋಟಿಗೂ ಅಧಿಕ ಮಂದಿ ಸೇವಿಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿ ಇಂದು ಮಾಹಿತಿ ನೀಡಲಾಯಿತು.
ಪ್ರಶ್ನೋತ್ತರ ವೇಳೆಯಲ್ಲಿ ವಿವರ ನೀಡಿದ  ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ನರೇಂದ್ರ ಸಿಂಗ್ ತೊಮರ್, ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ 800 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಸಮುದಾಯ ಜಲ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಬಹುದು ಎಂದು ಹೇಳಿದರು.
ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 12,577 ವಾಸಸ್ಥಾನಗಳಲ್ಲಿರುವ 10.06 ಕೋಟಿ ಜನತೆ ವಿಷಯುಕ್ತ ಅಧಿಕ ಫ್ಲೋರೈಡ್ ಯುಕ್ತ ನೀರನ್ನು ಕುಡಿಯುತ್ತಿದ್ದಾರೆ. ಇದಕ್ಕಾಗಿ ನೀತಿ ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ 800 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು ಈ ಮೂಲಕ 1,327 ಆರ್ಸೆನಿಕ್ ವಿಷ ಮತ್ತು 12,014 ಫ್ಲೋರೈಡ್ ಯುಕ್ತ ಪ್ರದೇಶಗಳಲ್ಲಿ ಜಲ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಈ ಮೂಲಕ ಅಡುಗೆಗೆ ಮತ್ತು ಕುಡಿಯಲು ಸುರಕ್ಷಿತ ನೀರನ್ನು ಬಳಸಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
ಇದಲ್ಲದೆ ಪಶ್ಚಿಮ ಬಂಗಾಳ ಮತ್ತು ರಾಜಸ್ತಾನಗಳಲ್ಲಿ ಮೇಲ್ಮೈ ನೀರಿನ ಆಧಾರದಲ್ಲಿ ನೀರನ್ನು ಪೂರೈಸುವ ಯೋಜನೆಗಳಿಗೆ ವಿಷಯುಕ್ತ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಲಾ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಮಾರ್ಚ್ 22ರ ವಿಶ್ವ ಜಲ ದಿನದಂದು ಸಚಿವಾಲಯ ರಾಷ್ಟ್ರೀಯ ಜಲ ಗುಣಮಟ್ಟ ಉಪ ಮಿಷನ್ ನ್ನು ಆರಂಭಿಸಿದ್ದು ನಾಲ್ಕು ವರ್ಷಗಳಲ್ಲಿ ವಿಷಯುಕ್ತ ನೀರು ಸಿಗುವ 28,000 ಪ್ರದೇಶಗಳಲ್ಲಿ ಶುದ್ಧ ಮತ್ತು ಸುರಕ್ಷಿತ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ