ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಕಾರ್ಯಕಾರಿಣಿ ಸಭೆ ಡಿ.22 ರಂದು ನಡೆಯಲಿದೆ.
ಸಭೆಯಲ್ಲಿ ರಾಹುಲ್ ಗಾಂಧಿ ಈಗಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಲಿದ್ದು, ಪ್ರಮುಖವಾಗಿ 2ಜಿ ಸ್ಪೆಕ್ಟ್ರಂ ತೀರ್ಪಿನ ಬಗ್ಗೆಯೂ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
2ಜಿ ಹಗರಣದ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಯುಪಿಎ ಸರ್ಕಾರದ ವಿರುದ್ಧ ಹೇರಲಾಗಿದ್ದ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಸ್ವತಃ ನ್ಯಾಯಾಲಯವೇ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಇದು ಸತ್ಯಕ್ಕೆ ಸಂದ ಜಯ ಎಂದು ಹೇಳಿದೆ. ಈ ಬಗ್ಗೆಯೂ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂಬ ನಿರೀಕ್ಷೆ ಇದೆ.