ಸಂಗ್ರಹ ಚಿತ್ರ 
ದೇಶ

2ಜಿ ಹಗರಣ: ಕನ್ನಿಮೋಳಿ, ಎ ರಾಜಾ ಸೇರಿ ಎಲ್ಲಾ ಆರೋಪಿಗಳು ಖುಲಾಸೆ!

2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯ ತನ್ನ ತೀರ್ಪು ನೀಡಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ನವದೆಹಲಿ: 2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯ ತನ್ನ ತೀರ್ಪು ನೀಡಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಹಗರಣದ ಪ್ರಮುಖ ಆರೋಪಿಗಳಾಗಿದ್ದ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಸಂಬಂಧಿ ಎ ರಾಜಾ ಅವರನ್ನೂ ಸೇರಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ. ಅಲ್ಲದೆ ತನಿಖಾ ಸಂಸ್ಥೆ ಮೇಲ್ಮನೆ ಕೋರ್ಟ್ ಗೆ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದರೆ, ಎಲ್ಲ ಆರೋಪಿಗಳು 5 ಲಕ್ಷ ಭದ್ರತಾ ಠೇವಣಿ ಇಡುವಂತೆಯೂ ನ್ಯಾಯಾಧೀಶರು ಆದೇಶದಲ್ಲಿ ಹೇಳಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ರು. 2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಡಿಎಂಕೆ ಮುಖಂಡ, ಮಾಜಿ ಟೆಲಿಕಾಂ ಸಚಿವ ಎ.ರಾಜಾ ಹಾಗೂ ಕರುಣಾನಿಧಿ ಪುತ್ರಿ ಕನ್ನಿಮೋಳಿ ಸಹಿತ 17 ಮಂದಿ ಪ್ರಮುಖ ಆರೋಪಿಗಳು  ಎಂದು ಈ ಹಿಂದೆ ಸಿಬಿಐ ಅಧಿಕಾರಿಗಳು ಚಾರ್ಜ್ ಶೀಟ್ ದಾಖಲಿದ್ದರು. ಅಲ್ಲದೆ ಸತತ 6 ವರ್ಷಗಳ ಈ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು. 
ಜಾರಿ ನಿರ್ದೇಶನಾಲಯ, ಸಿಬಿಐ ಆರೋಪಗಳನ್ನು ತಳ್ಳಿ ಹಾಕಿದ ನ್ಯಾಯಧೀಶ ಒ.ಪಿ.ಸೈನಿ ಅವರು ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದ್ದಾರೆ. ನಿಯಮ ಉಲ್ಲಂಘಿಸಿ 2ಜಿ ಹಂಚಿಕೆಯಿಂದ  30,000ಕೋ.ರೂ. ನಷ್ಟವಾಗಿದೆ ಎಂದು ಆರೋಪಿಸಲಾಗಿತ್ತು. ಹಗರಣ ಸಂಬಂಧ ನ್ಯಾಯಾಲಯ ಮೂರು ಪ್ರಕರಣಗಳನ್ನು ವಿಚಾರಣೆ ನಡೆಸಿತ್ತು. ಒಂದು ಪ್ರಕರಣ ಜಾರಿ ನಿರ್ದೇಶನಾಲಯ, ಇನ್ನೆರಡು ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಿ ತನ್ನ ವರದಿ ಸಲ್ಲಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು