ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ
ನವದೆಹಲಿ: ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ 2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಗುರುವಾರ ಸ್ವಾಗತಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಆಅವರು, ಸಿಬಿಐ ನ್ಯಾಯಾಲಯದ ತೀರ್ಪು ಸರಿಯಿದೆ. ನ್ಯಾಯಾಲಯ ಸರಿಯಾದ ತೀರ್ಪನ್ನು ನೀಡಿದೆ. ನ್ಯಾಯಾಲಯದ ತೀರ್ಪನ್ನು ಯಾರಿಂದಲೂ ನಿರ್ಣಿಯಸಲು ಸಾಧ್ಯವಿಲ್ಲ. ಸಾಕ್ಷ್ಯಾಧಾರವನ್ನು ನೋಡಿಯಷ್ಟೇ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ. ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳು ದೊರಯದೇ ಇದ್ದಾಗ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಸಂಬಂಧಿ ಎ ರಾಜಾ ಅವರನ್ನೂ ಸೇರಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ. ಅಲ್ಲದೆ, ತನಿಖಾ ಸಂಸ್ಥೆ ಮೇಲ್ಮನೆ ಕೋರ್ಟ್ ಗೆ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದರೆ, ಎಲ್ಲ ಆರೋಪಿಗಳು 5 ಲಕ್ಷ ಭದ್ರತಾ ಠೇವಣಿ ಇಡುವಂತೆಯೂ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.