ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ 
ದೇಶ

ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿದರೆ ಮಾತ್ರ ಪಾಕ್ ಜೊತೆಗೆ ಶಾಂತಿ ಮಾತುಕತೆ: ಬಿಪಿನ್ ರಾವತ್

ಭಯೋತ್ಪಾದನೆ ನೀಡುತ್ತಿರುವ ಬೆಂಬಲವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದರೆ ಮಾತ್ರ ಪಾಕಿಸ್ತಾನದ ಜೊತೆಗೆ ಭಾರತ ಶಾಂತಿಯುತ ಮಾತುಕತೆ ನಡೆಸುತ್ತದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು...

ಜೈಪುರ: ಭಯೋತ್ಪಾದನೆ ನೀಡುತ್ತಿರುವ ಬೆಂಬಲವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದರೆ ಮಾತ್ರ ಪಾಕಿಸ್ತಾನದ ಜೊತೆಗೆ ಭಾರತ ಶಾಂತಿಯುತ ಮಾತುಕತೆ ನಡೆಸುತ್ತದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಶುಕ್ರವಾರ ಹೇಳಿದ್ದಾರೆ. 
ಥಾರ್ ಮರುಭೂಮಿಯ ಬಳಿಯಿರುವ ಭಾರತ ಮತ್ತು ಪಾಕಿಸ್ತಾನ ಗಡಿ ಭಾಗದಲ್ಲಿ ಸೇನಾಪಡೆಗಳು ಆಯೋಜಿಸಿದ್ದ 'ಹಮೇಶಾ ವಿಜಯೀ' ತಾಲೀಮು ತರಬೇತು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾವತ್ ಅವರು, ಪಾಕಿಸ್ತಾನ ನಡವಳಿಕೆಯನ್ನು ನೋಡಿದರೆ, ನಿಜಕ್ಕೂ ಅದು ಶಾಂತಿಯನ್ನು ಬಯಸುತ್ತಿದೆ ಎಂಬುದು ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ. 
ಪಾಕಿಸ್ತಾನ ಮೊದಲು ಭಯೋತ್ಪಾದನೆ ನೀಡುತ್ತಿರುವ ಬೆಂಬಲವನ್ನು ನಿಲ್ಲಿಸಬೇಕು. ನಂತರವಷ್ಟೇ ಭಾರತ ಆ ದೇಶದೊಂದಿಗೆ ಶಾಂತಿಯುತ ಮಾತುಕತೆ ನಡೆಸಲಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಉತ್ತಮವಾಗಿರಬೇಕೆಂದು ನಾವು ಬಯಸುತ್ತೇವೆ. ಆದರೆ, ಪಾಕಿಸ್ತಾನದ ಕಡೆಯಿಂದ ಆ ರೀತಿಯ ಪ್ರತಿಕ್ರಿಯೆಗಳು ಬರುತ್ತಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡುತ್ತಿದೆ. ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ, ಪಾಕಿಸ್ತಾನ ಶಾಂತಿಯನ್ನು ಬಯಸುತ್ತಿದೆ ಎಂದು ತೋರುತ್ತಿಲ್ಲ ಎಂದು ತಿಳಿಸಿದ್ದಾರೆ. 
ಸೇನೆ, ಅರೆಸೇನಾ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಉಗ್ರರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಉಗ್ರ ಸಂಘಟನೆಗಳ ವಿರುದ್ದ ಇಸ್ಲಾಮಾಬಾದ್ ಕಠಿಣ ಕ್ರಮ ಕೈಗೊಂಡಿದ್ದೇ ಆದರೆ, ಭಾರತ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸುತ್ತದೆ ಎಂದು ಹೇಳಿದ್ದರು. 
ಭಯೋತ್ಪಾದನೆ ಕುರಿತ ನಮ್ಮ ಹಿತಾಸಕ್ತಿಯನ್ನು ಪಾಕಿಸ್ತಾನ ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ಈಗಲೂ ಸಮಯವಿದೆ. ಪಾಕಿಸ್ತಾನ ತನ್ನ ಮಣ್ಣಿನಲ್ಲಿ ನಡೆಯುತ್ತಿರುವ ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಭಾರತದೊಂದಿಗಿನ ಸ್ನೇಹವನ್ನು ಪಾಕಿಸ್ತಾನ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕುಮಾರ್ ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!