ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

20 ಸಾವಿರ ರಾಜಕೀಯ ಪ್ರೇರಿತ ಪ್ರಕರಣಗಳನ್ನು ರದ್ದುಪಡಿಸಲು ಉ.ಪ್ರದೇಶ ಸರ್ಕಾರ ನಿರ್ಧಾರ

ಶಾಸಕರು ಹಾಗೂ ಇತರರ ವಿರುದ್ಧ ರಾಜಕೀಯ ಪ್ರೇರಿತವಾಗಿ ದಾಖಲಿಸಲಾದ ಸುಮಾರು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂದಕ್ಕೆ ತೆಗೆದುಕೊಳ್ಳುವ ಸಲುವಾಗಿ ಕಾನೂನು ರಚನೆ ಮಾಡಲು ಉತ್ತರಪ್ರದೇಶ ಸರ್ಕಾರ...

ಲಖನೌ: ಶಾಸಕರು ಹಾಗೂ ಇತರರ ವಿರುದ್ಧ ರಾಜಕೀಯ ಪ್ರೇರಿತವಾಗಿ ದಾಖಲಿಸಲಾದ ಸುಮಾರು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂದಕ್ಕೆ ತೆಗೆದುಕೊಳ್ಳುವ ಸಲುವಾಗಿ ಕಾನೂನು ರಚನೆ ಮಾಡಲು ಉತ್ತರಪ್ರದೇಶ ಸರ್ಕಾರ ಶುಕ್ರವಾರ ನಿರ್ಧಾರ ಕೈಗೊಂಡಿದೆ. 
ಉತ್ತರ ಪ್ರದೇಶ ಸಂಘಟಿತ ಅಪರಾಧ ನಿಯಂತ್ರಣ ಮಸೂದೆ 2017 ಮೇಲಿನ ವಿಧಾನಸಭೆ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾನೂನು ಜಾರಿಗೆ ಬಂದ ಬಳಿಕ 20 ಸಾವಿರ ರಾಜಕೀಯ ಪ್ರೇರಿತ ಪ್ರಕರಣಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. 
ಸಚಿವರು ಶಾಸಕರು ಹಾಗೂ ಇನ್ನಿತರರ ವಿರುದ್ಧ ರಾಜಕೀಯ ಪ್ರೇರಿತವಾಗಿ ದಾಖಲಾಗಿರುವ ಸುಮಾರು 20 ಸಾವಿರ ಪ್ರಕರಣಗಳನ್ನು ರದ್ದು ಪಡಿಸುವುದೇ ಪ್ರಸ್ತಾವಿತ ಕಾಯ್ದೆಯ ಉದ್ದೇಶವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಇದು ಅನ್ವಯವಾಗಲಿದೆ ಎಂದು ವಿವರಣೆ ನೀಡಿದ್ದಾರೆ. ಆದರೆ, ಪ್ರಕರಣಗಳು ರಾಜಕೀಯ ಪ್ರೇರಿತ ಎಂದು ಪರಿಗಣಿಸಲು ಯಾವ ಮಾನದಂಡ ಅನುಸರಿಸಲಾಗುವುದು ಎಂಬುದನ್ನು ಸ್ಪಷ್ಟಪಡಿಸಿಲ್ಲ. 
ಉತ್ತರಪ್ರದೇಶದಲ್ಲಿನ ವಿವಾದಿತ ಯುಪಿ ಸಂಘಟಿತ ಅಪರಾಧ ನಿಗ್ರಹ ಮಸೂದೆ 2017ರ ಪ್ರಕಾರ, ಪ್ರತಿಭಟನಾ ನಿರತ ಸಚಿವರು ಹಾಗೂ ಶಾಸಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಬಹುದಾಗಿದೆ. ಇದರಿಂದ ಈ ಕಾಯ್ದೆಯ ದುರುಪಯೋಗವೇ ಹೆಚ್ಚು. ಪ್ರಸ್ತಾವಿತ ಮಸೂದೆಯ ದುರುಪಯೋಗವಾಗದಂತೆ ತಡೆಯಲಾಗುತ್ತದೆ ಎಂದು ಯೋಗಿ ಅವರು ವಿವರಿಸಿದ್ದಾರೆ. 
ಉತ್ತರಪ್ರದೇಶವನ್ನು ಶಾಂತಿಯುತ ಹಾಗೂ ಸ್ನೇಹಪರ ರಾಜ್ಯವಾಗಿಸಲು ಪ್ರಸ್ತಾವಿತ ಕಾಯ್ದೆಗೆ ವಿರೋಧ ಪಕ್ಷಗಳ ನಾಯಕರು ಬೆಂಬಲ ವ್ಯಕ್ತಪಡಿಸುವಂತೆ ಇದೇ ವೇಳೆ ಯೋಗಿ ಆದಿತ್ಯನಾಥ್ ಅವರು ಕೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!