ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮೊದಲ ಬಾರಿಗೆ ರಾಹುಲ್ ಗಾಂಧಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ನಂತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ದೇವಾಲಯ ಧ್ವಜವನ್ನೂ ಅರ್ಪಿಸಿದ್ದಾರೆ. ಕಳೆದ ಬಾರಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರವೇಶ ಪುಸ್ತಕದಲ್ಲಿ ಹೆಸರನ್ನು ನಮೂದಿಸಿ ದೇವಾಲಯಕ್ಕೆ ತೆರಳಿದ್ದು ವಿವಾದಕ್ಕೀಡಾಗಿತ್ತು.
ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಅಹಮದಾಬಾದ್ ಗೆ ತೆರಳಿರುವ ರಾಹುಲ್ ಗಾಂಧಿ ಪಕ್ಷದ ನಾಯಕರು, ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ್ದಾರೆ, ಪಕ್ಷದ ಸಭೆಯಲ್ಲಿ ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲುವುದಕ್ಕೆ ಕಾರಣವಾದ ಅಂಶಗಳು ಚರ್ಚೆಯಾಗಿದ್ದು, ಅಲ್ಪೇಶ್ ಠಾಕೂರ್ ನಂತಹ ಹೊರಗಿನ ನಾಯಕರನ್ನು ಪಕ್ಷಕ್ಕೆ ಕರೆ ತಂದಿದ್ದು ಹೊಡೆತ ಬಿದ್ದಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.