ನಾಗ್ಪುರ: ಆರ್ ಎಸ್ಎಸ್ ನ ಕಾರ್ಯಕರ್ತರಷ್ಟೇ ಅಲ್ಲದೇ ತುರ್ತು ಪರಿಸ್ಥಿತಿಯಲ್ಲಿ ಯಾರೆಲ್ಲಾ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರೋ ಅವರೆಲ್ಲರಿಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನ ಮಾನ ನೀಡಲು ತೀರ್ಮಾನಿಸಲಾಗಿದೆ. ಆದರೆ ಆರ್ ಎಸ್ಎಸ್ ಈ ಪ್ರಸ್ತಾವನೆಯನ್ನು ವಿರೋಧಿಸಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಸದಸ್ಯ ಏಕಾಂತ್ ಖಡ್ಸೆ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಈ ವಿಷಯಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಸ್ತಾವನೆ ನಮ್ಮ ಮುಂದಿದೆ. ಹೊಸ ವರ್ಷದಲ್ಲಿ ನಡೆಯಲಿರುವ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ತುರ್ತು ಪರಿಸ್ಥಿತಿಗೆ ವಿರುದ್ಧವಾಗಿ ಹೋರಾಡಿದವರಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನಮಾನ ನೀಡುವ ವಿಷಯ ಚರ್ಚೆಯಾಗಲಿದೆ ಎಂದು ತಿಳಿಸಿದ್ದಾರೆ.