ಮತದಾರರ ಪಟ್ಟಿಗೆ ಎನ್ ಆರ್ ಐ ಗಳ ನೋಂದಣಿ ದುಪ್ಪಟ್ಟು: ಚುನಾವಣಾ ಆಯೋಗ 
ದೇಶ

ಮತದಾರರ ಪಟ್ಟಿಗೆ ಎನ್ ಆರ್ ಐ ಗಳ ನೋಂದಣಿ ದುಪ್ಪಟ್ಟು: ಚುನಾವಣಾ ಆಯೋಗ

ಅನಿವಾಸಿ ಭಾರತೀಯರು ಭಾರತದ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುತ್ತಿರುವುದು ಕಳೆದ ಮೂರು ವರ್ಷಗಳಲ್ಲಿ ದುಪ್ಪಟ್ಟಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ನವದೆಹಲಿ: ಅನಿವಾಸಿ ಭಾರತೀಯರು ಭಾರತದ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುತ್ತಿರುವುದು ಕಳೆದ ಮೂರು ವರ್ಷಗಳಲ್ಲಿ ದುಪ್ಪಟ್ಟಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 
ವಿದೇಶದಲ್ಲಿರುವ ಒಟ್ಟಾರೆ ಭಾರತೀಯರ ಪೈಕಿ ಮತದಾನಕ್ಕಾಗಿ ನೋಂದಣಿ ಮಾಡಿಕೊಳ್ಳುತ್ತಿರುವ ಅನಿವಾಸಿ ಭಾರತೀಯರ ಸಂಖ್ಯೆ ಕಡಿಮೆ ಇದೆ. ಅನಿವಾಸಿ ಭಾರತೀಯರಿಗೆ ಪ್ರಾಕ್ಸಿ ಓಟಿಂಗ್ ಅಂದರೆ ಅವರ ಪರವಾಗಿ ಬೇರೆಯವರು ಮತ ಹಾಕುವ ಹಕ್ಕು ನೀಡಲು ಕೇಂದ್ರ ಸರ್ಕಾರ ಮುಂದಾಗಿರುವುದೂ ಸಹ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲು ಸಿದ್ಧತೆ ನಡೆಸಲಾಗಿದೆ. 
ಈಗಿನ ಕಾನೂನಿನ ಪ್ರಕಾರ ಭಾರತೀಯ ಪೌರತ್ವ ಹೊಂದಿರುವ ಅನಿವಾಸಿ ಭಾರತೀಯರು ಮಾತ್ರ ಮತ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. 2012 ರವರೆಗೆ ಅಂಕಿ-ಅಂಶಗಳ ಪ್ರಕಾರ 1,003,7761 ಎನ್ ಆರ್ ಐ ಗಳು ಮತ ಪಟಿಗೆ ನೋಂದಣಿ ಮಾಡಿಸಿಕೊಂಡಿದ್ದರು. 2014 ರಲ್ಲಿ 111,846 ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ.  ಕಳೆದ ಮೂರು ವರ್ಷಗಳಲ್ಲಿ ಒಟ್ಟು  24,348 ಅನಿವಾಸಿ ಭಾರತೀಯರು ನೋಂದಣಿ ಮಾಡಿಸಿಕೊಂಡಿದ್ದಾರೆ, ಈ ಪೈಕಿ 23,556 ಅನಿವಾಸಿಗಳು ಕೇರಳದವರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT